ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಹೆಬ್ರಿ: ಪಿರ್ಯಾದಿದಾರರಾದ ನರಸ ನಾಯ್ಕ (65), ತಂದೆ: ಮುದ್ದು ನಾಯ್ಕ, ವಾಸ: ಬ್ಯಾಣ, ಮಾರ್ಮಕ್ಕಿ, ಶಿವಪುರ ಗ್ರಾಮ, ಹೆಬ್ರಿ ತಾಲೂಕು, ಉಡುಪಿ ಜಿಲ್ಲೆ ಇವರ ಮಗ ಪ್ರಸಾದ (36) ರವರು ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದು ವಿಪರೀತ ಮದ್ಯಪಾನ ಮಾಡುವ ಚಟವುಳ್ಳವರಾಗಿರುತ್ತಾರೆ. ದಿನಾಂಕ 02/02/2021 ರಂದು ಮನೆಯಲ್ಲಿ ದನಗಳು ಕಾಣದ ಕಾರಣ ರಾತ್ರಿ 09:00 ಗಂಟೆಗೆ ಪ್ರಸಾದರವರು ದನಗಳನ್ನು ನೋಡಿ ಬರುವುದಾಗಿ ತಿಳಿಸಿ ಮನೆಯಿಂದ ಹೋಗಿರುತ್ತಾರೆ. ನಂತರ ಮನೆಯ ಹತ್ತಿರದ ರಾಜ್ ಕುಮಾರ ರವರು ಬಂದು ಶಿವಪುರ ಗ್ರಾಮದ ಎಲಿಪಾದೆ ಬಂಡೆಯ ಬಳಿ ಪ್ರಸಾದ ರವರು ಬಂಡೆಯಿಂದ ಕೆಳಗೆ ಬಿದ್ದು ಅವರ ತಲೆಗೆ ರಕ್ತ ಗಾಯವಾಗಿರುತ್ತದೆ ಎಂದು ತಿಳಿಸಿದ್ದು ಕೂಡಲೇ ಅಲ್ಲಿಗೇ ಹೋಗಿ ಅವರನ್ನು ಉಪಚರಿಸಿ ನೋಡಿದಾಗ ಅವರು ಉಸಿರಾಡುತ್ತಿದ್ದುದರಿಂದ ಅವರನ್ನು  ಚಿಕಿತ್ಸೆಯ ಬಗ್ಗೆ ರಾತ್ರಿ 10:30 ಗಂಟೆಗೆ  ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ವೈದ್ಯರಲ್ಲಿ ತೋರಿಸಿದಾಗ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ . ಪ್ರಸಾದರವರು ಸುಮಾರು 5-6 ಅಡಿ ಎತ್ತರದ ಕಲ್ಲು ಬಂಡೆಯ ಮೇಲಿಂದ ಕೆಳಗೆ ಬಿದ್ದು ಅವರ ತಲೆಗೆ ಪೆಟ್ಟಾಗಿ ಮೃತಪಟ್ಟಿರುವುದರಿಂದ ಮೃತರ ಮರಣದಲ್ಲಿ ಸಂಶಯವಿರುವುದಾಗಿ ನೀಡಿದ ದೂರಿನಂತೆ ಹೆಬ್ರಿ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 04/2021 ಕಲಂ: 174(C) ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತರ ಪ್ರಕರಣ

  • ಕಾರ್ಕಳ: ದಿನಾಂಕ 03/02/2021 ರಂದು  ತೇಜಸ್ವಿ ಟಿ ಐ, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಗ್ರಾಮಾಂತರ  ಠಾಣೆ ಇವರು   ಠಾಣೆಯಲ್ಲಿರುವಾಗ ಕಾರ್ಕಳ ತಾಲೂಕು ದುರ್ಗಾ ಗ್ರಾಮದ ತೆಳ್ಳಾರ್ ಆಸಿಯಾ ಮಂಜಿಲ್ ಎಂಬಲ್ಲಿ ದನದ ಮಾಂಸ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ಹೋಗಿದ್ದು ಅಲ್ಲಿ ಆಸಿಯಾ ಎಂಬುವವರು ತನ್ನ ಗಂಡ ಸೈಯದ್ ಜಲೀಲ್ ಹಾಗೂ  ಮಗ ಆಫ್ರಿಝ್ ರವರು ಎಲ್ಲಿಂದಲೋ ದನವನ್ನು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಪ್ಲಾಸ್ಟಿಕ್ ನಲ್ಲಿ ಕಟ್ಟಿ ಇಟ್ಟಿರುವುದಾಗಿಯೂ ಪೋಲೀಸರು ಬರುತ್ತಾರೆಂದು ತಿಳಿದು ಹಾಡಿಯಲ್ಲಿ ಓಡಿ ಪರಾರಿಯಾಗಿರುವುದಾಗಿ ತಿಳಿಸಿದ್ದು, ಆರೋಪಿತರುಗಳು ದನವನ್ನು ಎಲ್ಲಿಂದಲೋ ಕಳ್ಳತನ ಮಾಡಿ ಯಾವುದೇ ಪರವಾನಿಗೆ ಇಲ್ಲದೇ ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಪ್ಲಾಸ್ಟಿಕ್ ಕೈಚೀಲಗಳಲ್ಲಿ ಕಟ್ಟಿ ಇಟ್ಟಿರುವುದಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 18/2021 ಕಲಂ: 379 ಐ,ಪಿ,ಸಿ, ಮತ್ತು ಕಲಂ: 4,7,9, ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಪರಿರಕ್ಷಣೆ ಅಧಿನಿಯಮ 1964 ಮತ್ತು ಕಲಂ:11(1)(ಡಿ) ಪ್ರಾಣಿ ಹಿಂಸಾ ತಡೆ ಕಾಯ್ದೆ 1960 ಮತ್ತು ಕಲಂ: 4,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ 2020 ರಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 03-02-2021 06:20 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080