ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಪಡುಬಿದ್ರಿ: ಪಿರ್ಯಾದಿದಾರರಾದ ಪ್ರದೀಪ್ ಕೆ.ಎಂ (48), ತಂದೆ: ಮ್ಯಾಥ್ಯೂ ಕೆ.ಪಿ. ವಾಸ: ಮನೆ ನಂಬ್ರ. 1-221 ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಎದುರು ಉಚ್ಚಿಲ ಅಂಚೆ ಬಡಾ ಗ್ರಾಮ, ಕಾಪು ತಾಲೂಕು, ಉಡುಪಿ ಇವರು ದಿನಾಂಕ 13/08/2022 ರಂದು ಕಾಪುವಿನಲ್ಲಿ ಕೆಲಸ ಮಾಡಿಕೊಂಡಿದ್ದು, ನಂತರ ಬಸ್ಸಿನಲ್ಲಿ ರಾತ್ರಿ 8:30 ಗಂಟೆಗೆ ಉಚ್ಚಿಲಕ್ಕೆ ಬಂದು ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು-ಉಡುಪಿ ಏಕಮುಖ ರಸ್ತೆಯ ಪಶ್ಚಿಮ ಅಂಚಿನ ಮಣ್ಣು ರಸ್ತೆಯಲ್ಲಿ ಉಚ್ಚಿಲ ಅರಫಾ ಹೋಟೇಲಿನ ಎದುರು ಮನೆ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಅದೇ ಸಮಯದಲ್ಲಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ  KA-19-EU-9928 ನೇ ನಂಬ್ರದ ಸ್ಕೂಟಿ ಸವಾರ ಅಬ್ದುಲ್ ಖಾದರ್ ತನ್ನ  ಸ್ಕೂಟಿಯನ್ನು ಅತೀವೇಗ ಹಾಗೂ  ತೀರಾ ನಿರ್ಲಕ್ಷತನದಿಂದ ರಸ್ತೆಯ ಎಡ ಅಂಚಿಗೆ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರಿಗೆ ಡಿಕ್ಕಿ ಹೊಡೆದು ಬಿದ್ದಾಗ ಪಿರ್ಯಾದಿದಾರರ ಬಲಕಾಲಿಗೆ,  ಎಡಕಾಲಿನ ಹೆಬ್ಬೆರಳಿಗೆ, ಎಡ ಪಾದಕ್ಕೆ, ಎರಡೂ ಕಾಲು ಮೊಣಗಂಟಿಗೆ ಗಾಯವಾಗಿರುತ್ತದೆ. ಅಪಘಾತವಾದ ಬಗ್ಗೆ ಉಡುಪಿಯ ಆದರ್ಶ ಆಸ್ಫತ್ರೆಯಲ್ಲಿ ಹೊರರೋಗಿಯಾಗಿ ದಾಖಲಾಗಿದ್ದು,  ಅಪಘಾತದಿಂದ ಗಾಯವಾದ ಬಗ್ಗೆ ಖರ್ಚು ವೆಚ್ಚನೀಡುತ್ತೇನೆಂದೂ ಹೇಳಿ, ಇಲ್ಲಿಯವರೆಗೂ ಯಾವುದೇ ವೈದ್ಯಕೀಯ ವೆಚ್ಚವನ್ನು ನೀಡದೇ ಇದ್ದು, ಈ ಅಪಘಾತದಿಂದ ಗಾಯವು ದಿನ ದಿನಕ್ಕೆ ಹೆಚ್ಚಾಗಿ ನಡೆದಾಡಲು ಆಗದೇ ಇದ್ದಕಾರಣ ದಿನಾಂಕ 30/08/2022 ರಂದು ಉಡುಪಿ ಜಿಲ್ಲಾ ಆಸ್ಫತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 108/2022 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಪಡುಬಿದ್ರಿ: ಪಿರ್ಯಾದಿದಾರರಾದ ಹಮ್ಮಬ್ಬ (58), ತಂದೆ: ದಿ. ಹಸನಬ್ಬ, ವಾಸ: ಬದ್ರಿಯಾ ಮಂಜಿಲ್, ಬೊಗ್ಗರ್ ಲಚ್ಚಿಲ್, ನಡ್ಸಾಲು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಇವರ ಮಗ ಸಾಹುಲ್ ಹಮೀದ್ (32) ಎಂಬುವವರು  ಜೀವನದಲ್ಲಿ ಜಿಗುಪ್ಸೆಗೊಂಡ ದಿನಾಂಕ 02/09/2020 ರಂದು ಕಾಪು ತಾಲೂಕು ನಡ್ಸಾಲು ಗ್ರಾಮದ ಬೊಗ್ಗರ್ ಲಚ್ಚಿಲ್ ನಲ್ಲಿರುವ ತಮ್ಮ ಮನೆಯಲ್ಲಿನ ಪಾಯಿಖಾನೆಯ ಒಳಗೆ  ಸಂಜೆ 19:15 ಗಂಟೆಯಿಂದ 19:45 ಗಂಟೆಯ ಮದ್ಯಾವಧಿಯಲ್ಲಿ ಬಾತ್‌ರೂಮಿನಲ್ಲಿರುವ ನೀರಿನ ಪೈಪನ್ನು ಆ ರೂಮಿನ ಜಂತಿಗೆ ಕಟ್ಟಿ ಇನ್ನೊಂದು ತುದಿಯನ್ನು ತನ್ನ ಕುತ್ತಿಗೆಗೆ ನೇಣು ಬಿಗಿದು, ಪಾಯಿಖಾನೆಯ ಕಮೋಡಿನ ಮೇಲಿನಿಂದ ಕೆಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 19/2022, ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ .

ಇತರ ಪ್ರಕರಣ

  • ಪಡುಬಿದ್ರಿ: ದಿನಾಂಕ 30/08/2022 ರಂದು ಪುರುಷೋತ್ತಮ ಎ,  ಪೊಲೀಸ್ ಉಪನಿರೀಕ್ಷಕರು, ಪಡುಬಿದ್ರಿ ಪೊಲೀಸ್ ಠಾಣೆ ಇವರಿಗೆ ಕಾಪು ತಾಲೂಕು ಬಡಾ ಗ್ರಾಮದ ಬಾಂಗ್ಲ ಎಂಬಲ್ಲಿ ಮಹಮ್ಮದ್‌ ಫವಾಜ್‌ (18) ಎಂಬಾತನು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಅವನು ಯಾವುದೋ ಮಾದಕ ಪದಾರ್ಥ ಸೇವಿಸಿರಬಹುದು ಎಂಬ ಬಗ್ಗೆ  ಅನುಮಾನಗೊಂಡು ವಶಕ್ಕೆ ಪಡೆದುಕೊಂಡು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು ಮಹಮ್ಮದ್‌ ಫವಾಜ್‌ ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದಾಗಿ ದಿನಾಂಕ 02/09/2022 ರಂದು ವೈದ್ಯರು ದೃಢ ಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 109/2022 ಕಲಂ: 27 (B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಪಡುಬಿದ್ರಿ: ದಿನಾಂಕ 30/08/2022 ರಂದು ಪುರುಷೋತ್ತಮ ಎ,  ಪೊಲೀಸ್ ಉಪನಿರೀಕ್ಷಕರು, ಪಡುಬಿದ್ರಿ ಪೊಲೀಸ್ ಠಾಣೆ ಇವರಿಗೆ ಕಾಪು ತಾಲೂಕು ನಡ್ಸಾಲು ಗ್ರಾಮದ ಕಂಚಿನಡ್ಕ ಎಂಬಲ್ಲಿ ಗುರುನಾಥ ಆರ್‌ (23) ಎಂಬಾತನು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಅವನು ಯಾವುದೋ ಮಾದಕ ಪದಾರ್ಥ ಸೇವಿಸಿರಬಹುದು ಎಂಬ ಬಗ್ಗೆ  ಅನುಮಾನಗೊಂಡು  ವಶಕ್ಕೆ ಪಡೆದುಕೊಂಡು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು ಗುರುನಾಥ ಆರ್‌  ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದಾಗಿ ದಿನಾಂಕ 02/09/2022 ರಂದು ವೈದ್ಯರು ದೃಢ ಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 110/2022 ಕಲಂ: 27 (B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಪಡುಬಿದ್ರಿ: ದಿನಾಂಕ 30/08/2022 ರಂದು ಪುರುಷೋತ್ತಮ ಎ,  ಪೊಲೀಸ್ ಉಪನಿರೀಕ್ಷಕರು, ಪಡುಬಿದ್ರಿ ಪೊಲೀಸ್ ಠಾಣೆ ಇವರಿಗೆ  ಕಾಫು ತಾಲೂಕು ಬಡಾ ಗ್ರಾಮದ ಬಾಂಗ್ಲ ಎಂಬಲ್ಲಿ ಮಹಮ್ಮದ್‌ ಅಫ್ಜಲ್‌(22) ಎಂಬಾತನು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಅವನು ಯಾವುದೋ ಮಾದಕ ಪದಾರ್ಥ ಸೇವಿಸಿರಬಹುದು ಎಂಬ ಬಗ್ಗೆ  ಅನುಮಾನಗೊಂಡು ವಶಕ್ಕೆ ಪಡೆದುಕೊಂಡು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು ಮಹಮ್ಮದ್‌ ಅಫ್ಜಲ್‌ ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದಾಗಿ ದಿನಾಂಕ 02/09/2022 ರಂದು ವೈದ್ಯರು ದೃಢ ಪತ್ರವನ್ನು ನೀಡಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 111/2022 ಕಲಂ: 27 (B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 03-09-2022 09:38 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080