ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

 • ಹೆಬ್ರಿ: ದಿನಾಂಕ 04/05/2021 ರಂದು KA-04-MD- 5604 ನೇ ಓಮ್ನಿ ಕಾರನ್ನು ಅದರ ಚಾಲಕ ಶಶಿಧರ್ ಎಸ್ ಇವರು  ಸಂದೀಪ್ ಎಸ್.ಆರ್ (35) ಇವರನ್ನು ಕುಳ್ಳಿರಿಸಿಕೊಂಡು ಅಗುಂಬೆ- ಉಡುಪಿ ರಸ್ತೆಯಲ್ಲಿ ಅಗುಂಬೆ ಕಡೆಯಿಂದ ಉಡುಪಿ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ರಾತ್ರಿ 7:30 ಗಂಟೆಗೆ ನಾಡ್ಪಾಲು ಗ್ರಾಮದ ಸೀತಾನದಿಯ ಮೇಲ್ ಬಂಡಿಮಠ ಎಂಬಲ್ಲಿಗೆ ತಲುಪಿದಾಗ ಓಮ್ಮಿ ಕಾರು ಚಾಲಕನ ಹತೋಟಿ ತಪ್ಪಿ ರಸ್ತೆಯ ತೀರಾ ಎಡಬದಿಗೆ ಹೋಗಿ ಕಚ್ಚಾ ರಸ್ತೆಯ ಬದಿಯಲ್ಲಿದ್ದ ಒಂದು ಮರಕ್ಕೆ ಕಾರಿನ ಎಡಬದಿಯು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಎಡಬದಿಯು ಸಂಪೂರ್ಣ ಜಖಂ ಅಗಿದ್ದು. ಕಾರಿನಲ್ಲಿದ್ದ  ಸಂದೀಪ್ ಎಸ್ ಆರ್ ಇವರ ತಲೆಗೆ ತೀವ್ರ  ಸ್ವರೂಪದ ಗಾಯವಾಗಿದ್ದು. ಅವರನ್ನು ಚಿಕಿತ್ಸೆಯ ಬಗ್ಗೆ  ಮಣಿಪಾಲ ಕೆ.ಎಂ.ಸಿ ಅಸ್ಪತ್ರೆಗೆ ದಾಖಲು ಮಾಡಿದ್ದು.  ಅಲ್ಲಿ ಅವರು ಚಿಕಿತ್ಸೆ ಸ್ಪಂದಿಸದೇ ಅದೇ ದಿನ ರಾತ್ರಿ 11:00 ಗಂಟೆಗೆ ಮೃತ ಪಟ್ಟಿರುವುದಾಗಿದೆ. ಓಮ್ನಿ ಕಾರಿನ ಚಾಲಕ ಶಶಿಧರ್ ಎಸ್ ಇವರಿಗೆ ತರಚಿದ ಗಾಯವಾಗಿರುತ್ತದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 22/2021 ಕಲಂ: 279,304(A)  ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಗಂಡಸು ಕಾಣೆ ಪ್ರಕರಣ

 • ಬ್ರಹ್ಮಾವರ: ಪಿರ್ಯಾದಿದಾರರಾದ ಶಾಂತ (58), ಗಂಡ: ಶಂಕರ ಸುವರ್ಣ, ವಾಸ: ಮಾಸ್ತಿನಗರ, ಹನೇಹಳ್ಳಿ ಗ್ರಾಮ, ಬ್ರಹ್ಮಾವರ ತಾಲೂಕು ಇವರ ಗಂಡ ಶಂಕರ ಸುವರ್ಣ (65) ಎಂಬುವವರು ವಾಚ್‌ಮನ್ ಮತ್ತು ಹೊಟೇಲ್‌ನಲ್ಲಿ ಸಪ್ಲೇಯರ್ ಕೆಲಸ ಮಾಡಿಕೊಂಡಿರುತ್ತಾರೆ, ಅವರು ಬೇರೆ ಬೇರೆ ಊರುಗಳಿಗೆ ಕೆಲಸಕ್ಕೆಂದು ಹೋಗಿ 2-3 ತಿಂಗಳಿಗೊಮ್ಮೆ ಮನೆಗೆ ಬರುತ್ತಿರುವುದಾಗಿದೆ. ಅಲ್ಲದೇ ಅವರಿಗೆ ವಿಪರೀತ ಮದ್ಯಪಾನ ಮಾಡುವ ಹವ್ಯಾಸ ಇದ್ದು, ಮದ್ಯಪಾನ ಮಾಡಿ ಸ್ವಲ್ಪ ಮಾನಸಿಕವಾಗಿ ಅಸ್ವಸ್ಥರಾಗಿರುತ್ತಾರೆ. ಅವರು ದಿನಾಂಕ 10/11/2020 ರಂದು ಬೆಳಿಗ್ಗೆ 11:00 ಗಂಟೆಗೆ ಚಿಕ್ಕೊಡಿಗೆ ಕೆಲಸಕ್ಕೆ ಹೋಗುತ್ತೇನೆ ಎಂದು ಪಿರ್ಯಾದಿದಾರರಲ್ಲಿ ಹೇಳಿ ಮನೆಯಿಂದ ಹೋದವರು ಇದುವರೆಗೂ ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 69/2021 ಕಲಂ ಗಂಡಸು ಕಾಣೆಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

 • ಬೈಂದೂರು: ಫಿರ್ಯಾದಿ ವೆಂಕಟೇಶ  ಪ್ರಾಯ:35 ವರ್ಷ ತಂದೆ: ರಾಮ ಖಾರ್ವಿ, ,ವಾಸ; ಎರಡು ತಲೆಮನೆ, ಕೊಡೇರಿ, ಕಿರಿಮಂಜೇಶ್ವರ  ಇವರ ಅಣ್ಣ ದಿನಕರ ಖಾರ್ವಿ ಪ್ರಾಯ 48 ವರ್ಷ ಇವರು ದಿನಾಂಕ  04/05/2021 ರಂದು ಸಂಜೆ ಸುಮಾರು 6:00 ಗಂಟೆಗೆ ಕೊಡೇರಿ ಸಮುದ್ರಕ್ಕೆ ಮೀನುಗಾರಿಕೆಗೆ ಹೋಗಿದ್ದು, ರಾತ್ರಿ ಸಮಯ ಸುಮಾರು 09.30 ಗಂಟೆಗೆ ಫಿರ್ಯಾದಿದರರ ಅಣ್ಣನ ಜೊತೆಯಲ್ಲಿ ಹೋಗಿದ್ದ ಮಂಜುನಾಥ ಖಾರ್ವಿರವರು ಫಿರ್ಯಾದಿದಾರರಿಗೆ ಕರೆ ಮಾಡಿ ಮೀನುಗಾರಿಕೆ ಕೆಲಸ ಮಾಡುತ್ತಿರುವಾಗ ದಿನಕರ ಖಾರ್ವಿರವರು ಆಯತಪ್ಪಿ ಸಮುದ್ರಕ್ಕೆ ಬಿದ್ದಿರುವುದಾಗಿ ತಿಳಿಸಿದ್ದು ನಂತರ ಫಿರ್ಯಾದಿದರಾರು 4-5 ಜನರೊಂದಿಗೆ ದಿನಕರ ಖಾರ್ವಿರವರನ್ನು ಸಮುದ್ರದಿಂದ ಮೇಲಕ್ಕೆ ಎತ್ತಿ ಚಿಕಿತ್ಸೆ ಬಗ್ಗೆ ಬೈಂದೂರು ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿನ ವೈದ್ಯರು ದಿನಕರ ಖಾರ್ವಿರವರನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ  ಬೈಂದೂರು ಪೊಲೀಸ್‌ ಠಾಣಾ ಯು.ಡಿ.ಅರ್‌ ನಂಬ್ರ 16/2021  ಕಲಂ 174 ಸಿಅರ್‌ಪಿಸಿ  ರಂತೆ ಪ್ರಕರಣ ದಾಖಲಿಸಲಾದೆ.
 • ಗಂಗೊಳ್ಳಿ : ಫಿರ್ಯಾದಿ: ಅಶೋಕ ಪೂಜಾರಿ, ತಂದೆ: ದಿ. ನಂದ ಪೂಜಾರಿ, ವಾಸ: ಹೊಯ್ಯಾಣ, ಆಲೂರು ಗ್ರಾಮ, ಕುಂದಾಪುರ, ಇವರ ಅಣ್ಣ ಶೇಖರ ಪೂಜಾರಿ (45 ವರ್ಷ) ಎಂಬುವವರು ದಿನಾಂಕ 05/05/2021 ರಂದು ಬೆಳಿಗ್ಗೆ ಆಲೂರಿನ ಪ್ರವೀಣ ಪೂಜಾರಿ ಎಂಬುವವರ ಟೆಂಪೋದಲ್ಲಿ ಕೆಂಪು ಕಲ್ಲು ಲೋಡ್ ಕೆಲಸಕ್ಕೆ ಹೋಗಿದ್ದು, ಬೆಳಿಗ್ಗೆ ಸುಮಾರು 11:30 ಗಂಟೆಗೆ ಟೆಂಪೋದಲ್ಲಿ ಹರ್ಕೂರು ಗ್ರಾಮದ ಬಾರಂದಾಡಿ ಎಂಬಲ್ಲಿ ತಲುಪುವಾಗ್ಯೆ ಶೇಖರ ಪೂಜಾರಿ ಯವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಚಿಕಿತ್ಸೆ ಬಗ್ಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಅಲ್ಲಿನ ವೈದ್ಯರು ಮಧ್ಯಾಹ್ನ 12:35 ಗಂಟೆಗೆ ಶೇಖರ ಪೂಜಾರಿಯವರನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು, ಸದ್ರಿಯವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ  ಗಂಗೊಳ್ಳಿ ಪೊಲೀಸ್‌ಠಾಣೆ ಯುಡಿ.ಆರ್‌. ನಂಬ್ರ 16/2021 ಕಲಂ:174 ಸಿಆರ್‌ಪಿಸಿರಂತೆ ಪ್ರಕರಣ ದಾಖಲಿಸಲಾದೆ.

ಇತರ ಪ್ರಕರಣ

 • ಪಡುಬಿದ್ರಿ: ಪ್ರಸ್ತುತ ಕೋವಿಡ್-19 ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜ್ಯಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಅಂಗಡಿಗಳ ತಪಾಸಣೆಯ ಬಗ್ಗೆ ದಿಲೀಪ್ ಜಿ ಆರ್,  ಪೊಲೀಸ್ ಉಪ ನಿರೀಕ್ಷಕರು, ಪಡುಬಿದ್ರಿ ಠಾಣೆ ಇವರು ದಿನಾಂಕ 05/05/2021 ರಂದು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ ತಪಾಸಣೆ ಮಾಡುತ್ತಿರುವಾಗ ಬೆಳಿಗ್ಗೆ 08:00 ಗಂಟೆಗೆ ಆರೋಪಿ ಅರುಣ್ ಪಿ ಕೆ  ರವರು ಘನ ಕರ್ನಾಟಕ ಸರಕಾರವು ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ ನಿಯಮ ಉಲ್ಲಂಘಿಸಿ ಕಾಪು ತಾಲೂಕು, ನಡ್ಸಾಲು ಗ್ರಾಮದ ಪಡುಬಿದ್ರಿ ಪೇಟೆಯ ಮಸೀದಿ ರಸ್ತೆ ಸಮೀಪದ  ಪಿ.ಕೆ ದೂಜ ಪೂಜಾರಿ ಅಂಡ್‌ ಕೋ ಎಂಬ ಬಟ್ಟೆ ಅಂಗಡಿ ಯನ್ನು ತೆರೆದುಕೊಂಡಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 35/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
 • ಪಡುಬಿದ್ರಿ: ಪ್ರಸ್ತುತ ಕೋವಿಡ್-19 ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜ್ಯಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶ ಮತ್ತು ಮೇಲಾಧಿಕಾರಿಗಳ ಸೂಚನೆ ಯಂತೆ ಅನಗತ್ಯವಾಗಿ ತೆರೆದ ಅಂಗಡಿಗಳ ತಪಾಸಣೆಯ ಬಗ್ಗೆ ದಿವಾಕರ ಜೆ ಸುವರ್ಣ , ಸಹಾಯಕ ಪೊಲೀಸ್ ಉಪನಿರೀಕ್ಷಕರು, ಪಡುಬಿದ್ರಿ ಪೊಲೀಸ್ ಠಾಣೆ ಇವರು ದಿನಾಂಕ 05/05/2021 ರಂದು ಸಿಬ್ಬಂದಿಯವರೊಂದಿಗೆ ತಪಾಸಣೆ ಮಾಡುತ್ತಿರುವಾಗ ಸಮಯ ಬೆಳಿಗ್ಗೆ 08:30 ಗಂಟೆಗೆ ಆರೋಪಿ ಅಫ್ರಿದ್ ರವರು ಘನ ಕರ್ನಾಟಕ ಸರಕಾರವು ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ ನಿಯಮ ಉಲ್ಲಂಘಿಸಿ ಕಾಪು ತಾಲೂಕು, ನಡ್ಸಾಲು ಗ್ರಾಮದ ಪಡುಬಿದ್ರಿ ಪಡುಬಿದ್ರಿ ಕಾರ್ಕಳ ರಸ್ತೆ ಬಳಿ ಇರುವ ಅರ್ಬನ್ ಶೂ ಅಂಗಡಿ ಯನ್ನು ತೆರೆದುಕೊಂಡಿರುವುದಾಗಿದೆ.  ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 36/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
 • ಪಡುಬಿದ್ರಿ: ಪ್ರಸ್ತುತ ಕೋವಿಡ್-19 ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜ್ಯಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶ ಮತ್ತು ಮೇಲಾಧಿಕಾರಿಗಳ ಸೂಚನೆ ಯಂತೆ ಅನಗತ್ಯವಾಗಿ ತೆರೆದ ಅಂಗಡಿಗಳ ತಪಾಸಣೆಯ ಬಗ್ಗೆ ಸುದೇಶ ಶೆಟ್ಟಿ, ಸಹಾಯಕ ಪೊಲೀಸ್ ಉಪನಿರೀಕ್ಷಕರು, ಪಡುಬಿದ್ರಿ ಪೊಲೀಸ್ ಠಾಣೆ ಇವರು ದಿನಾಂಕ 05/05/2021 ರಂದು ಸಿಬ್ಬಂದಿಯವರೊಂದಿಗೆ ತಪಾಸಣೆ ಮಾಡುತ್ತಿರುವಾಗ ಸಮಯ ಬೆಳಿಗ್ಗೆ 09:00 ಗಂಟೆಗೆ ಆರೋಪಿ ಪ್ರಸಾದ್  ರವರು ಘನ ಕರ್ನಾಟಕ ಸರಕಾರವು ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ ನಿಯಮ ಉಲ್ಲಂಘಿಸಿ ಕಾಪು ತಾಲೂಕು, ನಡ್ಸಾಲು ಗ್ರಾಮದ ಪಡುಬಿದ್ರಿ ಪೇಟೆಯ ರಾ.ಹೆ. ಯ ಬದಿ ಇರುವ ನಾರಾಯಣ ಗುರು ಕಾಂಪ್ಲೆಕ್ಸ್ ಕಟ್ಟಡದಲ್ಲಿ"ಶ್ರೀ ಸಾಯಿ ಕಲೆಕ್ಷನ್ “ ಹೆಸರಿನ ಬಟ್ಟೆ ಅಂಗಡಿಯನ್ನು ತೆರೆದುಕೊಂಡಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 37/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
 • ಪಡುಬಿದ್ರಿ: ಪ್ರಸ್ತುತ ಕೋವಿಡ್-19 ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜ್ಯಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶ ಮತ್ತು ಮೇಲಾಧಿಕಾರಿಗಳ ಸೂಚನೆ ಯಂತೆ ಅನಗತ್ಯವಾಗಿ ತೆರೆದ ಅಂಗಡಿಗಳ ತಪಾಸಣೆಯ ಬಗ್ಗೆ ಸುದೇಶ ಶೆಟ್ಟಿ, ಸಹಾಯಕ ಪೊಲೀಸ್ ಉಪನಿರೀಕ್ಷಕರು, ಪಡುಬಿದ್ರಿ ಪೊಲೀಸ್ ಠಾಣೆ ಇವರು ದಿನಾಂಕ 05/05/2021 ರಂದು ಸಿಬ್ಬಂದಿಯವರೊಂದಿಗೆ ತಪಾಸಣೆ ಮಾಡುತ್ತಿರುವಾಗ ಸಮಯ ಬೆಳಿಗ್ಗೆ 09:30 ಗಂಟೆಗೆ ಆರೋಪಿ ಅಸ್ಫಾಕ್  ರವರು ಘನ ಕರ್ನಾಟಕ ಸರಕಾರವು ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ ನಿಯಮ ಉಲ್ಲಂಘಿಸಿ ಕಾಪು ತಾಲೂಕು, ನಡ್ಸಾಲು ಗ್ರಾಮದ ಪಡುಬಿದ್ರಿ ಪೇಟೆಯ ಪಂಚಾಯತ್ ಕಚೇರಿ ಎದುರು ರಾ.ಹೆ. ಯ ಬದಿ “ಡಿ ಫ್ಯಾಷನ್” ಹೆಸರಿನ ಬಟ್ಟೆ ಅಂಗಡಿಯನ್ನು ತೆರೆದುಕೊಂಡಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 38/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 
 • ಶಂಕರನಾರಾಯಣ: ದಿನಾಂಕ  05/05/2021 ರಂದು  12:30  ಗಂಟೆಗೆ  ಕುಂದಾಪುರ ತಾಲೂಕಿನ ಹೆಂಗವಳ್ಳಿ  ಗ್ರಾಮದ ಮರೂರು ಗೇರು ಬೀಜ  ಕಾರ್ಖಾನೆಯ ಬಳಿ  ಇರುವ   ಶ್ರೀದುರ್ಗಾ ಜನರಲ್ ಸ್ಟೋರ್‌‌ನಲ್ಲಿ ರಾಜ್ಯ ಸರಕಾರದ ಕೋವಿಡ್- 19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು  ಮಾಡಿರುವ ಆದೇಶವನ್ನು ಉಲ್ಲಂಘಿಸಿ ಯಾವುದೇ ಮುನ್ನಚ್ಚರಿಕೆ ಕ್ರಮ ಕೈಗೊಳ್ಳದೇ  1. ಸುಧಾಕರ ನಾಯ್ಕ ಪ್ರಾಯ 34 ವರ್ಷ ,ತಂದೆ:ಲಕ್ಷಣ ನಾಯ್ಕ, ವಾಸ: ಕಿಸ್ಕರ ಜೆಡ್ಡು  ಆರ್ಡಿ ಅಂಚೆ  ಅಲ್ಬಾಡಿ ಗ್ರಾಮ  ಹೆಬ್ರಿ   ತಾಲೂಕು,  2. ಶ್ರೀಮತಿ  ಆಶಾಲತಾ (28),  ಗಂಡ: ಸುಧಾಕರ ನಾಯ್ಕ,  ವಾಸ: ಕಿಸ್ಕರ ಜೆಡ್ಡು  ಆರ್ಡಿ ಅಂಚೆ  ಅಲ್ಬಾಡಿ ಗ್ರಾಮ  ಹೆಬ್ರಿ  ತಾಲೂಕು  ಇವರು   ಅವಧಿ   ಮೀರಿ  ಅಂಗಡಿಯಲ್ಲಿ   ವ್ಯಾಪಾರ   ವಹಿವಾಟು  ಮಾಡಿ ಅಪರಾಧ ಎಸಗಿರುವುದಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 45/2021  ಕಲಂ: 269, ಜೊತೆಗೆ  34 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.
   

ಇತ್ತೀಚಿನ ನವೀಕರಣ​ : 05-05-2021 06:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080