ಅಭಿಪ್ರಾಯ / ಸಲಹೆಗಳು

ಮಾಧಕ ವಸ್ತು ಸೇವನೆ ಪ್ರಕರಣ

  • ಬೈಂದೂರು: ಪಿರ್ಯಾದಿದಾರರಾದ ಪವನ್ ನಾಯಕ್ ಪೊಲೀಸ್ ಉಪ ನಿರೀಕ್ಷಕರು ಬೈಂದೂರು ಪೊಲೀಸ್ ಠಾಣೆ ಇವರು ದಿನಾಂಕ 30/05/2022 ರಂದು ಇಲಾಖಾ ಜೀಪಿನಲ್ಲಿ ಸಿಬ್ಬಂದಿಗಳೊಂದಿಗೆ ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಶಿರೂರು ಗ್ರಾಮದ  ಆರ್ಮೆ ಕರಿಕಟ್ಟೆ  ಬಳಿಯ ಸಾರ್ವಜನಿಕ ಸ್ಥಳದಲ್ಲಿ ಒರ್ವ ವ್ಯಕ್ತಿಯು ಅಮಲು ಪದಾರ್ಥ ಸೇವನೆ ಮಾಡುತ್ತಿರುವುದಾಗಿ ಮಾಹಿತಿ ಬಂದಂತೆ ಶಿರೂರು ಗ್ರಾಮದ ಆರ್ಮೆ ಕರಿಕಟ್ಟೆ ಬಳಿಯ ಸಾರ್ವಜನಿಕ ಸ್ಥಳಕ್ಕೆ 11:30 ಗಂಟೆಗೆ ಹೋದಲ್ಲಿ ಅಲ್ಲಿ ಒಬ್ಬ ವ್ಯಕ್ತಿಯು ತೂರಾಡಿಕೊಂಡು ಅಮಲಿನಲ್ಲಿರುವುದನ್ನು ಕಂಡು ಆತನ ಬಳಿ ಹೋಗಿ ಆತನ ಹೆಸರು ಕೇಳಿದಾಗ ತೊದಲುತ್ತಾ ಮಾಮ್ದು ಪುರ್ಕಾನ್ ಎಂಬುದಾಗಿ ಹೇಳಿದ್ದು ಆತನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಯಾವುದೋ ಮಾಧಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದುಕೊಂಡು ಬಂದು ವಿಚಾರಿಸಿ ವಿಳಾಸ ತಿಳಿದುಕೊಳ್ಳಲಾಗಿ ಮಾಮ್ದು ಪುರ್ಕಾನ್ (23) ತಂದೆ: ಮಾಮ್ದು  ಉಸ್ಮಾನ್ ವಾಸ:ಶಿರೂರು ಮಾರ್ಕೆಟ್, 10 ನೇ ವಾರ್ಡ, ಶಿರೂರು ಗ್ರಾಮ ಬೈಂದೂರು ತಾಲೂಕು ಎಂಬುದಾಗಿ ತಿಳಿಸಿದ್ದು ಆತನು ಗಾಂಜಾದಂತಹ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಅನುಮಾನವಿದ್ದು  ಪ್ರೊಫೆಸರ್ ಅಂಡ್ ಹೆಡ್  ಕೆಎಂಸಿ ಪೊರೆನ್ಸಿಕ್ ವಿಭಾಗರವರಿಂದ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಮಾಮ್ದು ಪುರ್ಕಾನ್ ರವರು ಗಾಂಜಾ ಸೇವಿಸಿರುವ ಬಗ್ಗೆ ವೈಧ್ಯರು ದೃಢಪತ್ರ ನೀಡಿರುವುದಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 109/2022 ಕಲಂ 27(B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಶಂಕರನಾರಾಯಣ: ಪಿರ್ಯಾದಿದಾರರಾದ ಲಕ್ಷ್ಮಣ ನಾಯ್ಕ (35) ತಂದೆ: ಬಾಬು ನಾಯ್ಕ ವಾಸ: ಚದ್ರಳಕೊಡ್ಲು ಹಿಲಿಯಾಣ ಗ್ರಾಮ ಬ್ರಹ್ಮಾವರ ಇವರ ತಂದೆ ಬಾಬು ನಾಯ್ಕ (62) ಎಂಬವರಿಗೆ ಕಿಡ್ನಿ ಸ್ಟೋನ್  ಹಾಗೂ ಕೈ ಕಾಲು ನೋವಿನಿಂದ ಬಳಲುತ್ತಿದ್ದು ಈ ಬಗ್ಗೆ ಚಿಕಿತ್ಸೆ ಕೊಡಿಸಿದರೂ  ಗುಣಮುಖವಾಗದೇ ಇದ್ದು ಅದೇ ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ದಿನಾಂಕ 07/06/2022 ರಂದು ಬೆಳಗಿನ ಜಾವ  3:00 ರಿಂದ 11:15 ಗಂಟೆಯ ನಡುವೆ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಚದ್ರಳಕೊಡ್ಲು ಎಂಬಲ್ಲಿನ  ಸೆಬಾಸ್ಟಿನ್ ಎಂಬುವರ ಜಾಗದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಅವರ ಸಾವಿನಲ್ಲಿ ಯಾವುದೇ ಸಂಶಯ ಇರುವುದಿಲ್ಲವಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣಾ ಠಾಣಾ ಯು.ಡಿ.ಆರ್‌ ಕ್ರಮಾಂಕ 13/2022 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 07-06-2022 06:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080