ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

 • ಶಂಕರನಾರಾಯಣ: ದಿನಾಂಕ 09/01/2023 ರಂದು 12:30 ಗಂಟೆಗೆ ಪಿರ್ಯಾದಿದಾರರಾದ ನವೀನ್ ಜಿ,.ಎಮ್ (47), ತಂದೆ: ಮಾಸ್ತಿ ಸುವರ್ಣ, ವಾಸ: ಮಾಲ ನಿಲಯ ಹರ್ತಟ್ಟು ಕೋಟ ಅಂಚೆ ಗಿಳಿಯಾರು ಗ್ರಾಮ ಬ್ರಹ್ಮಾವರ ತಾಲೂಕು ಇವರು ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದ ಶಾಡಿಗುಂಡಿ ಸೇತುವೆಯ ಬಳಿ ಹಾಲಾಡಿ ಕಡೆಗೆ KA-20-U-5465 ನೇ ನಂಬ್ರದ ಮೋಟಾರ್ ಸೈಕಲ್ ಚಲಾಯಿಸಿಕೊಂಡು ಬರುತ್ತಿರುವಾಗ ಆರೋಪಿ KA-21-B-0054 ನೇ ನಂಬ್ರದ ಟಿಪ್ಪರ್ ಲಾರಿಯನ್ನು ಶಿಂಗಿನಕೊಡ್ಲು ಕ್ರಾಸ್ ಕಡೆಯಿಂದ ಶಾಡಿಗುಂಡಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆ ಯಿಂದ ಚಲಾಯಿಸಿ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರ ಪಿರ್ಯಾದಿದಾರರು ಮೋಟಾರ್ ಸೈಕಲ್ ಸಮೇತ ರಸ್ತೆಯ ಮೇಲೆ ಬಿದ್ದ ಪರಿಣಾಮ ಪಿರ್ಯಾದಿದಾರರನ್ನು ಚಿಕಿತ್ಸೆಯ ಬಗ್ಗೆ ಕೊಟೇಶ್ವರದ ಡಾ, ಎನ್. ಆರ್ .ಆಚಾರ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಅವರನ್ನು ಪರೀಕ್ಷಿಸಿದ ವೈಧ್ಯರು ಚಿಕಿತ್ಸೆ ನೀಡಿ ಬಲಕಾಲಿಗೆ ಮೂಳೆ ಮುರಿತದ ಗಾಯವಾಗಿದ್ದು ಒಳರೋಗಿಯನ್ನಾಗಿ ದಾಖಲು ಮಾಡಿಕೊಂಡಿರುತ್ತಾರೆ, ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 14/2023 ಕಲಂ:279,338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
 • ಕಾರ್ಕಳ: ದಿನಾಂಕ 09/02/2023 ರಂದು ಪಿರ್ಯಾದಿದಾರರಾದ ವಿಕ್ಕಿ ಶೆಟ್ಟಿ (26), ತಂದೆ: ಶ್ರೀಧರ ಶೆಟ್ಟಿ, ವಾಸ: ಹಾರ್ಜಡ್ಡು, ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಇವರು ರಾತ್ರಿ ಕಾರ್ಕಳದಲ್ಲಿ ಕೆಲಸ ಮುಗಿಸಿ ಮೋಟಾರ್‌ ಸೈಕಲ್‌ ಸವಾರಿ ಮಾಡಿಕೊಂಡು ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಸಾಗಿರುವ ರಸ್ತೆಯಲ್ಲಿ ಮನೆಗೆ ಹೊರಟು ರಾತ್ರಿ 9:00 ಗಂಟೆಗೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿಗೆ ತಲುಪಿದಾಗ ಹೆಬ್ರಿ ಕಡೆಯಿಂದ ಕಾರ್ಕಳ ಕಡೆಗೆ KA-20-D-4396 ನೇ ನಂಬ್ರದ ಟೆಂಪೋ ಟ್ರಾವೆಲರ್‌ ವಾಹನವನ್ನು ಚಾಲಕ ಗೋಪಾಲ ಎಂಬಾತನು ಅತಿವೇಗ ಹಾಗೂ ನಿರ್ಲಕ್ಷತನದಿಂದ ಎಡಬದಿಯ ಮಣ್ಣು ರಸ್ತೆಗೆ ಚಲಾಯಿಸಿಕೊಂಡು ಬಂದು ಮಣ್ಣು ರಸ್ತೆಯಲ್ಲಿ ಹೆಬ್ರಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಕುಟ್ಟಿ ಶೆಟ್ಟಿ (50) ರವರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಕುಟ್ಟಿಶೆಟ್ಟಿರವರು ಮಣ್ಣುರಸ್ತೆಗೆ ಮಗುಚಿ ಬಿದ್ದಿದ್ದು ಪಿರ್ಯಾದಿದಾರರು ಮೋಟಾರ್‌ ಸೈಕಲ್‌ ನ್ನು ನಿಲ್ಲಿಸಿ ಸ್ಥಳಕ್ಕೆ ಹೋಗಿ ನೋಡಿದಾಗ ಅಪಘಾತಗೊಂಡ ಕುಟ್ಟಿ ಶೆಟ್ಟಿರವರ ಮುಖಕ್ಕೆ ಹಾಗೂ ಹಣೆಗೆ ತೀವ್ರ ಸ್ವರೂಪದ ರಕ್ತಗಾಯವಾಗಿ ಮಾತನಾಡುತ್ತಿರಲಿಲ್ಲ. ನಂತರ ಗಾಯಗೊಂಡ ಕುಟ್ಟಿ ಶೆಟ್ಟಿರವರನ್ನು ಚಿಕಿತ್ಸೆ ಬಗ್ಗೆ ರಾತ್ರಿ 9:45 ಗಂಟೆಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಕುಟ್ಟಿಶೆಟ್ಟಿರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 18/2023 ಕಲಂ: 279,304(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರ ಪ್ರಕರಣ

 • ಬೈಂದೂರು: ಪಿರ್ಯಾದಿದಾರರಾದ ನಿರಂಜನ್ ಗೌಡ ಬಿ ಎಸ್, ಪೊಲೀಸ್ ಉಪನಿರೀಕ್ಷಕರು, ಬೈಂದೂರು ಪೊಲೀಸ್ ಠಾಣೆ ಇವರಿಗೆ ದಿನಾಂಕ 09/02/2023 ರಂದು ಬೈಂದೂರು ಠಾಣಾ ವ್ಯಾಪ್ತಿಯ ಶಿರೂರು ಮಾರ್ಕೇಟ್ ಬಳಿ ರೌಂಡ್ಸ ಕರ್ತವ್ಯದಲ್ಲಿರುವಾಗ ಸಾರ್ವಜನಿಕ ಸ್ಥಳದಲ್ಲಿ ತೂರಾಡಿಕೊಂಡಿದ್ದ ಆರೋಪಿತ ಶೇಖ್ ಶಹದಾಬ್ (28) ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಯ ಬಗ್ಗೆ ವೈದ್ಯಾಧಿಕಾರಿಗಳು ಶ್ರೀ ಮಾತಾ ಆಸ್ಪತ್ರೆ ಕುಂದಾಪುರ ರವರ ಮುಂದೆ ಹಾಜರು ಪಡಿಸಿದ್ದು ಇವರನ್ನು ಪರೀಕ್ಷಿಸಿದ ವೈದ್ಯಾಧಿಕಾರಿಯವರು ಶೇಖ್ ಸಹದಾಬ್ ಗಾಂಜಾ ಸೇವಿಸಿರುವುದು ದೃಢ ಪಟ್ಟಿರುವುದಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 25/2023 ಕಲಂ: 27 (ಬಿ) ಎನ್.ಡಿ.ಪಿ.ಎಸ್. ಕಾಯ್ದೆ-1985 ರಂತೆ ಪ್ರಕರಣ ದಾಖಲಾಗಿರುತ್ತದೆ .
 • ಶಂಕರನಾರಾಯಣ: ಪಿರ್ಯಾದಿದಾರರಾದ ದೇವಿ (70), ಗಂಡ: ಅಣ್ಣಪ್ಪ ನ್ಯಾಕ್, ವಾಸ: ಬೋಗಿ ಹಾಡಿಮನೆ ಕೊಡ್ಲಾಡಿ ಗ್ರಾಮ ಕುಂದಾಪುರ ತಾಲೂಕು ಇವರು ದಿನಾಂಕ 09/02/2023 ರಂದು 15:00 ಗಂಟೆಗೆ ಒಬ್ಬರೇ ಮನೆಯಲ್ಲಿ ಇರುವಾಗ ಆರೋಪಿಗಳಾದ 1.ರಾಧಕೃಷ್ಣ ನಾಯ್ಕ ,ತಂದೆ: ದಿ. ಬಾಬು ನಾಯ್ಕ, 2. ಮಂಜುನಾಥ ನಾಯ್ಕ, ತಂದೆ: ಗುಂಡು ನಾಯ್ಕ , 3. ಹೆರಿಯ ನಾಯ್ಕ, ತಂದೆ: ಮಂಜು ನಾಯ್ಕ,4. ಮಿಥುನ್ ಎಲ್ಲರೂ ಕೊಡ್ಲಾಡಿ ಗ್ರಾಮ ಕುಂದಾಪುರ ತಾಲೂಕು ಇವರು ಪಿರ್ಯಾದಿದಾರರಿಗೆ ಸೇರಿದ ಕುಂದಾಪುರ ತಾಲೂಕಿನ ಕೊಡ್ಲಾಡಿ ಗ್ರಾಮದ ಸರ್ವೇ ನಂಬ್ರ 72 ರಲ್ಲಿ ಇರುವ ಅಡಿಕೆ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ 30 ರಿಂದ 40 ಅಡಿಕೆ ಗಿಡಗಳನ್ನು ಕಿತ್ತು ದ್ವಂಸ ಮಾಡಿ ನಷ್ಟವುಂಟು ಮಾಡಿರುತ್ತಾರೆ. ಈ ಸಮಯ ಪಿರ್ಯಾದಿದಾರರು ವಿಚಾರಿಸಿದಾಗ ಆರೋಪಿಗಳು ಸೇರಿ ಪಿರ್ಯಾದಿದಾರರನ್ನು ದೂಡಿ ಹಾಕಿ ಅವಾಚ್ಯ ಶಬ್ದಗಳಿಂದ ಜೀವ ಬೆದರಿಕೆ ಹಾಕಿರುವುದಾಗಿದ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 15/2023 ಕಲಂ:,447, 504, 506, 354, 427 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 10-02-2023 09:33 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080