ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಉಡುಪಿ: ಪಿರ್ಯಾದಿದಾರರಾದ ಗಣೇಶ್ ಮೇಸ್ತ (47) ವರ್ಷ,ತಂದೆ: ಕಮಾಲಾಕ್ಷ ಮೇಸ್ತ ವಾಸ: ಕೆಳ ನೇಜಾರು, ಕಲ್ಯಾಣಪುರ ಗ್ರಾಮ ಮತ್ತು ಅಂಚೆ, ಉಡುಪಿ ತಾಲೂಕು ಇವರ  ತಮ್ಮ ಮಹೇಶ್ (42)ಎಂಬವರು ದಿನಾಂಕ 07/09/2022 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ನೇ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಅಂಬಾಗಿಲು ಕಡೆಯಿಂದ ತನ್ನ ಮನೆಯಾದ ಕೆಳ ನೇಜಾರಿಗೆ ತನ್ನ ಸ್ಕೂಟರ್ ನಂಬ್ರ KA-20 EX-5698 ನೇದರಲ್ಲಿ ಬರುತ್ತಿರುವಾಗ ಸಮಯ ಸುಮಾರು ಬೆಳಿಗ್ಗೆ 07:30 ಗಂಟೆಗೆ ಪುತ್ತೂರು ಗ್ರಾಮದ ಶ್ರೀ ಮಾಸ್ತಿಅಮ್ಮ ದೇವಸ್ಥಾನ ದಾಟಿ ಮುಂದಕ್ಕೆ ಹೋಗುತ್ತಿರುವಾಗ ಎದುರುಗಡೆಯಿಂದ ಅಂದರೆ ಅಂಬಾಗಿಲು ಕಡೆಯಿಂದ ಸಂತೆಕಟ್ಟೆ ಕಡೆಗೆ ಆರೋಪಿ KA-20 MB-6885 ನೇ ಕಾರಿನ ಚಾಲಕಿ ಶಿಲ್ಪಾ ಎಂಬವರು ತಾನು ಚಲಾಯಿಸುತ್ತಿದ್ದ ಕಾರನ್ನುದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ ಸರ್ವಿಸ್ ರಸ್ತೆಗೆ ಸೇರುವ ಸ್ಥಳದಲ್ಲಿ ಯಾವುದೇ ಸೂಚನೆಯನ್ನು ನೀಡದೇ ಕಾರನ್ನು ಸರ್ವಿಸ್ ರಸ್ತೆಗೆ ತಿರುಗಿಸುವರೇ ಕಾರನ್ನು ಒಮ್ಮಲೇ ನಿಲ್ಲಿಸಿದಾಗ ಕಾರಿನ ಹಿಂಬಂದಿಗೆ ಡಿಕ್ಕಿ ಹೊಡೆದ ಪರಿಣಾಮ ಗಣೇಶ್ ಮೇಸ್ತ ರವರ ತಮ್ಮ ಮಹೇಶ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ತಲೆಗೆ, ಮುಖಕ್ಕೆ, ಬಲಭುಜಕ್ಕೆ ರಕ್ತಗಾಯವಾಗಿದ್ದು, ಅಲ್ಲದೇ ಹೊಟ್ಟೆಗೆ ಗುದ್ದಿದ ಜಖಂ ಆದವರನ್ನು ಚಿಕಿತ್ಸೆಯ ಬಗ್ಗೆ ಬ್ರಹ್ಮಾವರ ಮಹೇಶ್ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ ದಿನಾಂಕ 08/09/2022 ರಂದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿರುವುದಾಗಿದೆ.  ಈ ಅಪಘಾತಕ್ಕೆ  KA-20 MB-6885 ನೇ ಕಾರಿನ ಚಾಲಕಿ ಶಿಲ್ಪಾರವರ ದುಡುಕುತನ ಮತ್ತು ನಿರ್ಲಕ್ಷತನದ ಚಾಲನೆಯೇ ಕಾರಣವಾಗಿರುವುದಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 69/2022 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕಾರ್ಕಳ: ಪಿರ್ಯಾದಿದಾರರಾದ ಸಚಿನ್, (30) ತಂದೆ: ಗೋಪಾಲಕೃಷ್ಣ ನಾಯಕ್, ವಾಸ: ನಿರ್ಮಲ ನಿವಾಸ, ಕಾಡುಹೊಳೆ, ಮುನಿಯಾಲು, ವರಂಗ ಗ್ರಾಮ, ಕಾರ್ಕಳ ಇವರು ದಿನಾಂಕ 05/09/2022 ರಂದು KA-20 EG-3668 ನೇ ನೋಂದಣಿ ಸಂಖ್ಯೆಯ ಹೀರೋ ಕಂಪನಿಯ ಮೋಟಾರ್ ಸೈಕಲ್ ನಲ್ಲಿ ರಾತ್ರಿ ಸಮಯ ಸುಮಾರು 7:20 ಗಂಟೆಗೆ ಕಾರ್ಕಳದಿಂದ ಮುನಿಯಾಲಿಗೆ ಹೊರಟು ಸಮಯ 7:30 ಗಂಟೆಗೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ದುರ್ಗಾ ಆರ್ಟ್ಸ್ ಎಂಬಲ್ಲಿ ರಸ್ತೆಯ ಎಡಬದಿಯಲ್ಲಿ ಚಲಾಯಿಸಿಕೊಂಡು ಹೋಗುತ್ತಿರುವಾಗ ಸಚಿನ್ ಇವರ ಮೋಟಾರ್ ಸೈಕಲ್ ನ ಹಿಂದುಗಡೆಯಿಂದ KA-20 EW-8783 ನೇ ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನ ಸವಾರ ವಿನಾಯಕ ನಾಯಕ್ ಎಂಬಾತನು ತನ್ನ ದ್ವಿಚಕ್ರ ವಾಹನವನ್ನು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸಚಿನ್ ರವರ ಮೋಟಾರ್ ಸೈಕಲ್ ನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದಿದ್ದು, ನಂತರ ಸಚಿನ್ ರವರನ್ನು ಕಾರ್ಕಳ ಗಾಜ್ರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆ ಬಗ್ಗೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು, ದಿನಾಂಕ 06/09/2022 ರಂದು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಿಸಿರುತ್ತಾರೆ. ಈ ಅಪಘಾತದಿಂದ ಪಿರ್ಯಾದಿದಾರರ ಬಲಕಾಲಿಗೆ ಮೂಳೆಮುರಿತ ಉಂಟಾಗಿರುವುದಾಗಿ ವೈದ್ಯರು ತಿಳಿಸಿರುತ್ತಾರೆ.  ಪಿರ್ಯಾದಿದಾರರು ಮೋಟಾರ್ ಸೈಕಲ್ ಚಲಾಯಿಸುವಾಗ ಹೆಲ್ಮೆಟ್ ಧರಿಸಿರುತ್ತಾರೆ. ಈ ಅಪಘಾತಪಡಿಸಿದ ಮೋಟಾರ್ ಸೈಕಲ್ ಸವಾರ ವಿನಾಯಕ ನಾಯಕ್ ಎಂಬಾತನು ಪಿರ್ಯಾದಿದಾರರ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದು ಈ ವರೆಗೆ ಚಿಕಿತ್ಸಾ ವೆಚ್ಚವನ್ನು ಭರಿಸದೇ ಇರುವುದರಿಂದ ತಡವಾಗಿ ದೂರು ನೀಡಿರುವುದಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 115/2022 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ

  • ಉಡುಪಿ: ಪಿರ್ಯಾದಿದಾರರಾದ ವೈಷ್ಣವಿ ಮಡಿ (20) ತಂದೆ: ಸುರಾಲು ನಾರಾಯಣ ಮಡಿ ವಾಸ: ಮನೆ ನಂಬ್ರ: 8-1-43ಬಿ, ಎಲ್‌ಎಲ್‌ಆರ್‌ ಮಾರ್ಗ, ಕುಂಜಿಬೆಟ್ಟು, ಶಿವಳ್ಳಿ ಗ್ರಾಮದ ಉಡುಪಿ ಇವರ ತಂದೆ-ತಾಯಿ ಕುಟುಂಬಸ್ಥರೊಂದಿಗೆ ನೇಪಾಳಕ್ಕೆ ಪ್ರವಾಸ ಹೋಗಿದ್ದು, ದಿನಾಂಕ 09/09/2022 ರಂದು 21:00 ಗಂಟೆಯಿಂದ ದಿನಾಂಕ 10/09/2022 ರಂದು ಬೆಳಿಗ್ಗೆ 10:45 ಗಂಟೆ ನಡುವಿನ ಸಮಯಲ್ಲಿ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ಎಲ್‌ಎಲ್‌ಆರ್‌ ಮಾರ್ಗದಲ್ಲಿರುವ ಮನೆ ನಂಬ್ರ: 8-1-43ಬಿ ಮನೆಯ ಮುಖ್ಯದ್ವಾರದ ಬಾಗಿಲನ್ನು ಯಾರೋ ಕಳ್ಳರು ಯಾವುದೋ ಆಯುಧದಿಂದ ಮುರಿದು ಒಳಪ್ರವೇಶಿಸಿ, ಮನೆಯ ದೇವರ ಕೋಣೆಯಲ್ಲಿದ್ದ 500 ಗ್ರಾಂ ತೂಕದ ಬೆಳ್ಳಿಯ ದೇವರ ಪೀಠ, 50 ಗ್ರಾಂ ತೂಕದ ಬೆಳ್ಳಿಯ ಸಣ್ಣ ತಟ್ಟೆ, 150 ಗ್ರಾಂ ತೂಕದ ಬೆಳ್ಳಿಯ ಅರಶಿನ ಕುಂಕುಮ ಬೌಲ್‌, 20 ಗ್ರಾಂ ತೂಕದ ಬೆಳ್ಳಿಯ ಸಣ್ಣ ಕುಂಕುಮ ಕರಡಿಗೆ, 25 ಗ್ರಾಂ ತೂಕದ ಬೆಳ್ಳಿಯ ಗಣಪತಿಯ ಪೀಠ ಸೇರಿ ಒಟ್ಟು 845 ಗ್ರಾಂ ತೂಕದ ಬೆಳ್ಳಿ ಸಾಮಾಗ್ರಿಗಳು ಮತ್ತು ಸಿಸಿ ಟಿವಿ ಡಿವಿಆರ್‌, ವೈಪೈ ರೂಟರ್‌ ನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತುಗಳ ಅಂದಾಜು ಮೌಲ್ಯ ರೂಪಾಯಿ 64,000/- ಆಗಬಹುದುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 139/2022 ಕಲಂ: 454, 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

ಅಸ್ವಾಭಾವಿಕ ಮರಣ ಪ್ರಕರಣ

  • ಪಡುಬಿದ್ರಿ: ಪಿರ್ಯಾದಿದಾರರಾದ ಚೇತನಾ ಮನೋಜ್ ಗಾಂಭೀರ್ (42) ಗಂಡ: ಮನೋಜ್ ಗಾಂಭೀರ್, ವಾಸ: ಗಣೇಶ ಕೃಪಾ, ಬೀಡು ಬಳಿ, ಪಡುಬಿದ್ರಿ, ನಡ್ಸಾಲು ಗ್ರಾಮ, ಕಾಪು ಇವರ ತಂದೆ ರಾಘು ಜಿ ಶೆಟ್ಟಿ(75) ಎಂಬುವರು ಕೃಷಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟ ಮತ್ತು ಮಾನಸಿಕ ಖಾಯಲೆಯಿಂದ ಬಳಲುತ್ತಿದ್ದವರು, ಅದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 06/09/2022 ರಂದು ಮಧ್ಯಾಹ್ನ 15:45 ಗಂಟೆಯ ವೇಳೆಗೆ ಕಾಪು ತಾಲೂಕು ನಡ್ಸಾಲು ಗ್ರಾಮ ಪಡುಬಿದ್ರಿ ಬೀಡುವಿನಲ್ಲಿರುವ ತಮ್ಮ ಮನೆಯ ಹಿಂಬದಿ ಗೆದ್ದಿಲು ಹುಳುವಿಗೆ ಹಾಕುವ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರನ್ನು ಮುಕ್ಕಾ ಶ್ರೀನಿವಾಸ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯ ಬಗ್ಗೆ ದಾಖಲಿಸಿದ್ದು, ಸದ್ರಿ ರಾಘು ಜಿ ಶೆಟ್ಟಿ ರವರು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 10/09/2022 ರಂದು ಬೆಳಿಗ್ಗೆ 06:15 ಗಂಟೆಗೆ ಮೃತಪಟ್ಟಿದ್ದು, ಸದ್ರಿಯವರ ಮರಣದಲ್ಲಿ ಯಾವುದೇ ಸಂಶಯವಿರುವುದಿಲ್ಲವಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 20/2022 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 10-09-2022 05:59 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080