ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ 

  • ಕೋಟ: ಪಿರ್ಯಾದಿದಾರರಾದ ಅಶೋಕ ಶೆಟ್ಟಿಗಾರ (47),ತಂದೆ: ಮಂಜುನಾಥ ಶೆಟ್ಟಿಗಾರ' ವಾಸ: ಕೆರೆ ಬದಿ ಮನೆ ಸಾಸ್ತಾನ ಗುಂಡ್ಮಿ ಗ್ರಾಮ ಬ್ರಹ್ಮಾವರ ತಾಲೂಕು ಇವರ ಮನೆಯ ಪಕ್ಕದಲ್ಲಿ ಅವರ ತಾಯಿ ಗುಲಾಬಿ(78)ರವರು ಪಿರ್ಯಾದಿದಾರರ ಅಣ್ಣ ಹಾಗೂ ತಂದೆಯ ಜೊತೆಯಲ್ಲಿ ಸಂಸಾರದೊಂದಿಗೆ ವಾಸವಾಗಿರುತ್ತಾರೆ ದಿನಾಂಕ 03/07/2021 ರಂದು ಮಧ್ಯಾಹ್ನ 3.00 ಗಂಟೆಯ ಸಮಯಕ್ಕೆ ಎಲ್ಲರೂ ಮನೆಯಲ್ಲಿರುವಾಗ ಪಿರ್ಯಾದಿದಾರರ ತಾಯಿ ಗುಲಾಬಿರವರು ಮನೆಯ ಬಚ್ಚಲು ಕೋಣೆಯಲ್ಲಿ ಒಲೆಯ ಬಳಿ ಕುಳಿತು ಬಿಸಿನೀರು ಕಾಯಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ಸೀರೆಗೆ ತಾಗಿ ಮೈಗೆ ಹೊತ್ತಿಕೊಂಡು .ಕಾಲಿನಿಂದ ಸೊಂಟದವರೆಗೆ ತೀವೃ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಆಗ ಪಿರ್ಯಾದಿದಾರರ ತಾಯಿ ಜೋರಾಗಿ ಕೂಗಿಕೊಂಡಿದ್ದರಿಂದ ಪಿರ್ಯಾದಿದಾರರು ಹಾಗೂ ಅವರ ಅಣ್ಣ ಕೂಡಲೇ ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ ಎಂ ಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಒಳ ರೋಗಿಯಾಗಿ ದಾಖಲು ಮಾಡಿಕೊಂಡಿರುತ್ತಾರೆ. ಗುಲಾಬಿರವರು ಚಿಕಿತ್ಸೆಯಲ್ಲಿರುತ್ತಾ ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 11/07/2021 ರಂದು ಬೆಳಿಗ್ಗೆ 07.30 ಗಂಟೆಗೆ ಮೃತ ಪಟ್ಟಿರುತ್ತಾರೆ. ಈ ಬಗ್ಗೆ ಕೋಟ ಪೊಲೀಸ್‌ ಯುಡಿಆರ್ ಕ್ರಮಾಂಕ 22/2021 ಕಲಂ:174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 11-07-2021 06:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ