ಅಭಿಪ್ರಾಯ / ಸಲಹೆಗಳು

ಅಫಘಾತ ಪ್ರಕರಣ

  • ಕಾರ್ಕಳ : ದಿನಾಂಕ 12/01/2022 ರಂದು ಸಂಜೆ 7:20 ಗಂಟೆಗೆ ಪಿರ್ಯಾದಿ ಗಣೇಶ್ ಮೂಲ್ಯ ಇವರು ತನ್ನ ಬಾವ ಹರೀಶ್ ಮೂಲ್ಯ ರವರ ಜೊತೆ ಭಾವನ ಮನೆಯಾದ ಬೋಳಕ್ಕೆ ಹೋಗುವರೇ ಕೆದಿಂಜೆ ಶ್ರೀ ದುರ್ಗಾ ಫ್ಯೂಲ್ಸ್ ಪೆಟ್ರೋಲ್ ಪಂಪ್ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಮೋಟಾರು ಸೈಕಲ್ ನಂಬ್ರ KA20EA0477 ನೇಯದರ ಸವಾರನು ಮೋಟಾರು ಸೈಕಲನ್ನು ಅತೀ ವೇಗ ಮತ್ತು ಅಜಾಗರೂಕತೆಯಿಂದ ಆತನ ತೀರಾ ಎಡಬದಿಯಲ್ಲಿ ಸವಾರಿಮಾಡಿಕೊಂಡು ಬಂದು ರಸ್ತೆ ಬದಿಯಲ್ಲಿ  ನಡೆದುಕೊಂಡು ಹೋಗುತ್ತಿದ್ದ ಪಿರ್ಯಾದುದಾರರ ಭಾವನಿಗೆ ಡಿಕ್ಕಿ ಹೊಡೆದ ಪರಿಣಾಮ ಹರೀಶ್ ಮೂಲ್ಯರವರ ತಲೆ, ಬೆನ್ನಿಗೆ ಗಾಯವಾಗಿದ್ದು ಮತ್ತು ಎರಡೂ ಕಾಲುಗಳಿಗೆ ತೀವೃ ಗಾಯವಾಗಿದ್ದು ಅಪಘಾತಕ್ಕೆ ಕಾರಣನಾದ ಮೋಟಾರು ಸೈಕಲ್ ಸವಾರನಿಗೂ ಗಾಯವಾಗಿರುತ್ತದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ ೦4/2021 ಕಲಂ 279, 337, 338 ಐಪಿಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.   

ಅಸ್ವಾಭಾವಿಕ ಮರಣ ಪ್ರಕರಣ

  • ಉಡುಪಿ: ಶ್ರೀಧರ  ರಾವ್‌, ಪ್ರಾಯ: 65 ವರ್ಷ ರವರು ಕಳೆದ 15 ವರ್ಷಗಳಿಂದ ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದವರು, ದಿನಾಂಕ:13/01/2022 ರಂದು ಬೆಳಿಗ್ಗೆ 09:45 ಗಂಟೆಗೆ ತೆಂಕನಿಡಿಯೂರಿನ ತಮ್ಮ ಮನೆಯಿಂದ ಉಡುಪಿಗೆ ಸಾಮಾನು ಖರೀದಿಸಲೆಂದು ಬಂದವರು, ಹರ್ಷ ಷೋರೂಮ್‌ ಬಳಿ ತೀವ್ರ ಅಸ್ವಸ್ಥಗೊಂಡವರನ್ನು 108 ಆ್ಯಂಬುಲೆನ್ಸರವರು ಚಿಕಿತ್ಸೆಯ ಬಗ್ಗೆ ಬೆಳಿಗ್ಗೆ 10:30 ಗಂಟೆಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆತರುವಾಗಲೇ ಮೃತಪಟ್ಟಿದ್ದು, ಮೃತರು ಹೃದಯಾಘಾತದಿಂದಲೋ ಅಥವಾ ಇನ್ನಾವುದೋ ಖಾಯಿಲೆಯಿಂದ  ಮೃತಪಟ್ಟಿರಬಹುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 04/2022 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.   

ಇತ್ತೀಚಿನ ನವೀಕರಣ​ : 13-01-2022 05:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080