ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ 

  • ಹೆಬ್ರಿ: ಪಿರ್ಯಾದಿದಾರರಾದ ಲೋಯ್ ಲೊಬೋ ಪ್ರಾಯ: 25 ವರ್ಷ, ತಂದೆ: ವಿಕ್ಟರ್ ಲೊಬೋ ವಾಸ: ಧನುಷ್ ನಿಲಯ, ಕ್ಯಾಸ್ತಲಿನೋ ಕಾಲೊನಿ 4ನೇ ಕ್ರಾಸ್ ಶಕ್ತಿನಗರ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಇವರು ದಿನಾಂಕ 13/03/2021 ರಂದು ಬೆಳಿಗ್ಗೆ 04:30 ಗಂಟೆಗೆ ಮಂಗಳೂರಿನಿಂದ ತನ್ನ KA-19-MJ-2725 ನೇ ಸ್ವಿಫ್ಟ್ ಕಾರಿನಲ್ಲಿ ಸ್ನೇಹಿತರೊಂದಿಗೆ ಕುಂದಾದ್ರಿಗೆ ಪ್ರಕೃತಿ ವೀಕ್ಷಣೆಗೆಂದು ಹೊರಟು ಉಡುಪಿ – ಆಗುಂಬೆ ಮಾರ್ಗವಾಗಿ ಹೋಗುತ್ತಿರುವಾಗ ಬೆಳಿಗ್ಗೆ 06:30 ಗಂಟೆಗೆ ಆಗುಂಬೆ ಘಾಟಿಯ 7ನೇ ತಿರುವಿನ ಬಳಿ ತಲುಪುವಾಗ ಎದುರಿನಿಂದ ಆಗುಂಬೆ - ಸೋಮೇಶ್ವರ ಮಾರ್ಗವಾಗಿ KA-41-C-5235 ನೇ ಮಿನಿ ಲಾರಿಯ ಚಾಲಕನು ಲಾರಿಯನ್ನು ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ ಬಂದು ಪಿರ್ಯಾದಿದಾರರ ಕಾರಿನ ಬಲಭಾಗಕ್ಕೆ ಢಿಕ್ಕಿ ಹೊಡೆದು ತಳ್ಳಿಕೊಂಡು ಬಂದ ಪರಿಣಾಮ ಕಾರು ರಸ್ತೆಯ ತೀರಾ ಎಡಬಾಗದ ತಗ್ಗು ಪ್ರದೇಶಕ್ಕೆ ಬಿದ್ದು ಮರಕ್ಕೆ ಸಿಕ್ಕಿಕೊಂಡಿರುತ್ತದೆ. ಈ ಅಪಘಾತದಿಂದ ಪಿರ್ಯಾದಿದಾರರ ಕಾರು ಜಖಂ ಗೊಂಡಿರುತ್ತದೆ. ಹಾಗೂ ಕಾರಿನಲ್ಲಿದ್ದ ಪಿರ್ಯಾದಿದಾರರಿಗೆ ಹಾಗೂ ಅವರ ಸ್ನೇಹಿತರಿಗೆ ಯಾವುದೇ ಗಾಯಗಳಾಗಿರುವುದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 14/2021 ಕಲಂ:279 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ 

  • ಅಜೆಕಾರು: ದಿನಾಂಕ 12/03/2021 ರಂದು ಸಂಜೆ ವೇಳೆ ಮರ್ಣೆ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಪಿರ್ಯಾದಿದಾರರಾದ ಶ್ರೀಮತಿ ಜಯಶ್ರೀ (58) ,ಗಂಡ: ಎ ಜಯನಂದ ಶೆಟ್ಟಿ,ವಾಸ:: ವಿಷ್ಣು ಮೂರ್ತಿ ನಿಲಯ ಗುಡ್ಎಯಂಗಡಿ ಮರ್ಣೆ ಗ್ರಾಮ ಕಾರ್ಕಳ ತಾಲೂಕು ಇವರ ಮನೆಯಂಗಳದಲ್ಲಿ 3 ಪ್ಲಾಸ್ಟಿಕ್ ಗೋಣಿಚೀಲದಲ್ಲಿ ತಲಾ 10 ಕೆ.ಜಿಯಂತೆ ಕೂಡಿಟ್ಟ ಅಡಿಕೆಯನ್ನು ದಿನಾಂಕ 12/03/2021 ರಂದು ಸಂಜೆ 7:00 ಗಂಟೆಯಿಂದ ದಿನಾಂಕ 13/03/2021 ರಂದು ಬೆಳಿಗ್ಗೆ 09:00 ಗಂಟೆಯ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಕಳವಾದ ಒಟ್ಟು 30 ಕೆ.ಜಿ ಅಡಿಕೆಯ ಮೌಲ್ಯ ಸುಮಾರು 6,000/- ರೂಪಾಯಿ ಆಗಿರುತ್ತದೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 09/2021 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 13-03-2021 06:46 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080