ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಅಮಾಸೆಬೈಲು :ದಿನಾಂಕ 13/05/2021 ಸುಬ್ಬಣ್ಣ ಬಿ ಪೊಲೀಸು ಉಪನಿರೀಕ್ಷಕರು ಅಮಾಸೆಬೈಲು ಪೊಲೀಸು ಠಾಣೆ ಸಿಬ್ಬಂದಿಗಳೊಂದಿಗೆ ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದು ಮಾನ್ಯ ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತ ದಿನಾಂಕ 10-05-2021  ರಿಂದ 24-05-2021  ರವರೆಗೆ ಕೋವಿಡ್ – 19  ಸಾಂಕ್ರಾಮಿಕ  ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಆದೇಶ ಹೊರಡಿಸಿದ್ದು ಅನಗತ್ಯ ವಾಹನಗಳ ಓಡಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು ಬೆಳಿಗ್ಗೆ 10:30 ಗಂಟೆಗೆ ರಟ್ಟಾಡಿ ಗ್ರಾಮದ ರಟ್ಟೇಶ್ವರ ದೇವಸ್ಥಾನದ  ಬಳಿ ಆಪಾದಿತ ವಿಘ್ನೇಶ್ ಪ್ರಾಯ 28 ವರ್ಷ ತಂದೆ: ಆನಂದ ಕತ್ಕೋಡು ರಟ್ಟಾಡಿ ಗ್ರಾಮ ಕುಂದಾಪುರ ತಾಲೂಕು ಈತನು KA 05 HV 9649  ಡಿಸ್ಕವರ್ ಮೋಟಾರು ಸೈಕಲನ್ನು  ಚಲಾಯಿಸಿಕೊಂಡು ಸಕಾರಣವಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿಕೊಂಡು ಬಂದಿರುವುದು ಕಂಡು ಬಂದಿರುತ್ತದೆ. ಸದ್ರಿ  ಮೇಲ್ಕಂಡ ದ್ವಿಚಕ್ರ ವಾಹನ ಸವಾರ  ಕೋವಿಡ್ – 2019  ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು  ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು  ಹರಡುವ ಸಂಭವವಿದೆಯೆಂದು ತಿಳಿದೂ ಕೂಡಾ ಅನಾವಶ್ಯಕವಾಗಿ ಸಕಾರಣವಿಲ್ಲದೆ ಸಾರ್ವಜನಿಕ  ಸ್ಥಳದಲ್ಲಿ  ಸಂಚರಿಸಿಕೊಂಡು ನಿರ್ಲಕ್ಷತನದಿಂದ ಕೋವಿಡ್ ನಿಯಮವನ್ನು ಉಲ್ಲಂಘಿಸಿ ಸರಕಾರ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿನ ನಿಯಮಗಳನ್ನು ಉಲ್ಲಂಘಿಸಿ ಜೀವಕ್ಕೆ ಅಪಾಯಕರವಾದಂಥ ರೋಗವು ಹರಡುವಂತೆ ಮಾಡಿ ನಿರ್ಲಕ್ಷತನ ತೋರಿರುವುದರಿಂದ ಸದ್ರಿ ವಾಹನವನ್ನು  ಸ್ವಾಧೀನಪಡಿಸಿಕೊಂಡಿದ್ದು, ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 17/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಹಿರಿಯಡ್ಕ: ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 10/05/2021 ರಿಂದ 24/05/2021 ರ ವರೆಗೆ ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಲುವಾಗಿ  ಲಾಕ್ ಡೌನ್ ಆದೇಶ ಹೊರಡಿಸಿದ್ದು,  ಈ ಲಾಕ್ ಡೌನ್ ಜ್ಯಾರಿಗೊಳಿಸುವ ಬಗ್ಗೆ  ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು,  ಈ ಬಗ್ಗೆ ಪುಷ್ಪಾ , ಪಿಎಸ್ ಐ, ಹಿರಿಯಡ್ಕ ಪೊಲೀಸ್ ಠಾಣೆ ಇವರು  ದಿನಾಂಕ 13/05/2021 ರಂದು  ಮಧ್ಯಾಹ್ನ ಸಿಬ್ಬಂದಿಯವರೊಂದಿಗೆ ರೌಂಡ್ಸ ಕರ್ತವ್ಯದಲ್ಲಿರುವಾಗ ಪೆರ್ಡೂರು  ಗ್ರಾಮದ ಪೆರ್ಡೂರು ಬಸ್  ನಿಲ್ದಾಣ ಬಳಿ  AP 03 BP 1114 ನೇ  VOX VEGAN   ಕಾರು ಸವಾರ ಪ್ರದೀಪ್ ಅನಗತ್ಯ ಓಡಾಟ ಮಾಡಿ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು, ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 30/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 13-05-2021 06:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ