ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಗಂಗೊಳ್ಳಿ: ಪಿರ್ಯಾದಿದಾರರಾದ ಸಂತೋಷ ಖಾರ್ವಿ (42), ತಂದೆ: ಗೋವಿಂದ ಖಾರ್ವಿ, ವಾಸ: ಲಕ್ಷ್ಮೀ ನಿವಾಸ, ಬೀಚ್ ರೋಡ್, ತ್ರಾಸಿ ಪೋಸ್ಟ್ ಮತ್ತು ಗ್ರಾಮ, ಕುಂದಾಪುರ ತಾಲೂಕು ಇವರು ದಿನಾಂಕ 12/10/2021 ರಂದು ಹರೀಶ ಖಾರ್ವಿಯವರ ಮೋಟಾರ್ ಸೈಕಲ್ ನಂಬ್ರ KA-20-ES-0141 ನೇದರಲ್ಲಿ ಸಹ ಸವಾರನಾಗಿ ಕುಳಿತುಕೊಂಡು ತ್ರಾಸಿ ಕಡೆಯಿಂದ ಮರವಂತೆ ಹಾರ್ಬರ್ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ರಸ್ತೆಯಲ್ಲಿ ಹೋಗುತ್ತಿರುವಾಗ ಮದ್ಯಾಹ್ನ 12:15 ಗಂಟೆಗೆ ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಅರಮಾ ದೇವಸ್ಥಾನದ ಎದುರುಗಡೆ ತಲುಪುವಾಗ ಹರೀಶ ಖಾರ್ವಿಯವರು ತನ್ನ ಮೋಟಾರ್ ಸೈಕಲ್ ನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ಹೋಗುತ್ತಿರುವಾಗ ಎದುರುಗಡೆಯಿಂದ ನಾಯಿಯೊಂದು ಮೋಟಾರ್ ಸೈಕಲ್ ಗೆ ಅಡ್ಡ ಬಂದಿದ್ದು ಮೋಟಾರ್ ಸೈಕಲ್ ಸವಾರ  ಹರೀಶ ಖಾರ್ವಿಯವರು ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿ ಪಿರ್ಯಾದಿದಾರರು ಹಾಗೂ ಸವಾರ ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಪಿರ್ಯಾದಿದಾರರ ಬಲಕಾಲಿನ ತೊಡೆಗೆ ಮೂಳೆ ಮುರಿತದ ಒಳನೋವು, ಎಡ ಮುಂಗೈಗೆ ತರಚಿದ ಗಾಯ ಹಾಗೂ ಹರೀಶ ಖಾರ್ವಿಯವರಿಗೆ ತಲೆಯ ಹಿಂಬದಿಗೆ, ಬಲಕೈ ಬೆರಳಿಗೆ, ಬಲ ಮುಂಗಾಲಿಗೆ ರಕ್ತಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಕುಂದಾಪುರ ವಿನಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿಕೊಂಡಿರುತ್ತಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 95/2021  ಕಲಂ: 279, 338  ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  
     

ಇತ್ತೀಚಿನ ನವೀಕರಣ​ : 13-10-2021 10:34 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ