ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕಾರ್ಕಳ: ಪಿರ್ಯಾದಿದಾರರಾದ ನಾರಾಯಣ ಶೆಟ್ಟಿ, (59)ತಂದೆ: ದಿ. ಸುಬ್ಬಯ್ಯ ಶೆಟ್ಟಿ, ವಾಸ: ಕಲ್ಪವೃಕ್ಷ ನಿಲಯ, ಭಾರತ್ ಬೀಡಿ ಕಾಲೋನಿ, ಎ ಸಿ ರಸ್ತೆ, ಕಾಬೆಟ್ಟು, ಕಾರ್ಕಳ ಕಸಬ ಗ್ರಾಮ ಕಾರ್ಕಳ ಇವರು ದಿನಾಂಕ 14/08/2021 ರಂದುರಾತ್ರಿ 20:00 ಗಂಟೆಗೆ ಕುಕ್ಕುಂದೂರು ಗ್ರಾಮದ ಪೂರ್ಣಿಮಾ ಸಿಲ್ಕ್ ಎದುರು ರಸ್ತೆಯ ಪೂರ್ವಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ಜೋಡುರಸ್ತೆ ಕಡೆಯಿಂದ ಕಾರ್ಕಳ ಕಡೆಗೆ KA-20-AA-9796 ನಂಬ್ರದ ಅಟೋರಿಕ್ಷಾವನ್ನು ಅದರಚಾಲಕ ಅಶೋಕ ಎಂಬಾತನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇವರು ರಸ್ತೆಗೆ ಬಿದ್ದು ತಲೆಗೆ ರಕ್ತಗಾಯವಾಗಿದ್ದು ಎಡಭುಜಕ್ಕೆತರಚಿದ ಗಾಯ ಮತ್ತು ಸೊಂಟಕ್ಕೆಗುದ್ದಿದ ಜಖಂಆಗಿರುವುದಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 101/2021 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಶಂಕರನಾರಾಯಣ: ಪಿರ್ಯಾದಿದಾರರಾದ ಬಸವ (34) ತಂದೆ, ಕುಳ್ಳ ಹಸಲ ವಾಸ, ದೇವರಬಾಳು ಕಟ್ಟಿನಾಡಿ  ಹಳ್ಳಿಹೊಳೆ ಗ್ರಾಮ ಬೈಂದೂರು ಇವರ ಮಗ ಭಾರ್ಗವ 1ವರ್ಷ 3 ತಿಂಗಳು ಈತನು ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಮಣಿಪಾಲ ಕೆ,ಎಮ್‌.ಸಿ  ಆಸ್ಪತ್ರೆಗೆ ತೋರಿಸಿದಾಗ ಸ್ವಲ್ಪ ಸಮಯ ನಂತರ ಚಿಕಿತ್ಸೆಯ ಬಗ್ಗೆ ಬರುವಂತೆ ತಿಳಿಸಿರುತ್ತಾರೆ, ದಿನಾಂಕ 14/08/2021 ರಂದು ಭಾರ್ಗವ ಇವನಿಗೆ ವಿಪರೀತ ಹೊಟ್ಟೆ ನೋವು ಶುರವಾದಾಗ ಚಿಕಿತ್ಸೆಯ ಬಗ್ಗೆ ಕುಂದಾಪುರ ಸರಕಾರಿ  ಆಸ್ಪತ್ರೆಗೆ 17:40 ಘಂಟೆಗೆ  ಕರೆದುಕೊಂಡು ಹೋದಾಗ ಅಲ್ಲಿ ಅವನನ್ನು ಪರೀಕ್ಷಿಸಿದ ವೈದ್ಯರು ಆತನು ಆಸ್ಪತ್ರೆಗೆ ಬರುವೇ ಮೊದಲು ಮೃತಪಟ್ಟಿರುತ್ತಾನೆ ಎಂದು ತಿಳಿಸಿರುತ್ತಾರೆ. ಭಾರ್ಗವ ಈತನಿಗೆ ಹುಟ್ಟಿದಾಗಲಿಂದಲೇ ಇರುವ ಹೃದಯ  ಸಂಬಂಧಿ ಕಾಯಿಲೆ ಉಲ್ಬಣಗೊಂಡು ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 28/2021 ಕಲಂ:174  ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 15-08-2021 06:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080