ಅಭಿಪ್ರಾಯ / ಸಲಹೆಗಳು

ಅಫಘಾತ ಪ್ರಕರಣ

  • ಕಾರ್ಕಳ: ಪ್ರಕರಣದ ಸಾರಾಂಶವೇನೆಂದರೆ, ದಿನಾಂಕ: 17/03/2022 ರಂದು ಸಂಜೆ 7:00 ಗಂಟೆ ಸಮಯಕ್ಕೆ ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಗೋಳಿಕಟ್ಟೆ ಕ್ರಾಸ್ ಎಂಬಲ್ಲಿ ಹಾದುಹೋಗಿರುವ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ KA04-MT-0543 ನೇ ನಂಬ್ರದ ಕಾರು ಚಾಲಕನು ತನ್ನ ಬಾಬ್ತು ಕಾರನ್ನು ಕಾರ್ಕಳ ಕಡೆಯಿಂದ ರಸ್ತೆಯ ತೀರಾ ಬಲಭಾಗಕ್ಕೆ ಚಲಾಯಿಸಿಕೊಂಡು ಬಂದು ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಸುರೇಶ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ KA20-W-9182 ನೇ ನಂಬ್ರದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸುರೇಶ್ ಹಾಗೂ ಸಹಸವಾರ ವಿಶ್ವನಾಥ್ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು ಈ ಅಪಘಾದಿಂದಾಗಿ ಬೈಕ್ ಸವಾರ ಸುರೇಶ್ ರವರ ಮುಖಕ್ಕೆ ಹಾಗೂ ಎಡಕಾಲಿಗೆ ರಕ್ತಗಾಯ, ಹಾಗೂ ಸಹಸವಾರ ವಿಶ್ವನಾಥ್ ರವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದು ಸುರೇಶ್ ರವರು ಕಾರ್ಕಳ ಸಿ,ಟಿ ಆಸ್ಪತ್ರೆಯಲ್ಲಿಯೂ ವಿಶ್ವನಾಥ್ ರವರು ಉಡುಪಿ ಆದರ್ಶ ಆಸ್ಪತ್ರೆಯಲ್ಲಿಯೂ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 33/2022 ಕಲಂ: 279,337,338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  
  • ಕಾಪು: ಪಿರ್ಯಾದಿ ಮ್ಯಾಥ್ಯೂ ಬಿ. ಎಮ್ ಇವರು ಟೆನ್ಸ್ ಎಂಬವರು ಚಾಲಕರಾಗಿದ್ದ ಬುಲೆರೋ ಪಿಕ್‌ಅಪ್ ನಂಬ್ರ ಕೆ.ಎಲ್. 59 ಹೆಚ್. 1200 ನೇದರಲ್ಲಿ ಕುಳಿತುಕೊಂಡು ದಿನಾಂಕ 17-03-2022 ರಂದು ಶಿವಮೊಗ್ಗ  ಸಾಗರದಿಂದ ಕೇರಳದ ಕಡೆಗೆ ಉಡುಪಿ  ಮಂಗಳೂರು ರಾ ಹೆ 66 ರಲ್ಲಿ ವಾಹನವನ್ನು ಚಲಾಯಿಸಿಕೊಂಡು ಬರುತ್ತಿರುವಾಗ ರಾತ್ರಿ 11.30  ಗಂಟೆಗೆ ಮಲ್ಲಾರು ಗ್ರಾಮದ ಕೊಪ್ಪಲಂಗಡಿ ಮಸಿದಿ ಬಳಿ ತಲುಪುತ್ತಿದ್ದಂತೆ, ಅದೇ ರಸ್ತೆಯಲ್ಲಿ ದಾಮೋದರರವರು ತನ್ನ  ಬಾಬ್ತು ಕೆ.ಎ. 20 ಬಿ 790 ನೇ  ಕಾರನ್ನು ಮಂಗಳೂರು ಕಡೆಯಿಂದ ಏಕಮುಖ ಸಂಚಾರ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯಿಂದ  ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಬುಲೆರೋ ಪಿಕ್‌ ಅಪ್ ವಾಹನಕ್ಕೆ ಢಿಕ್ಕಿ  ಹೊಡೆದ ಪರಿಣಾಮ ಟೆನ್ಸ್ ರವರಿಗೆ ಹೊಟ್ಟೆಗೆ, ಬಲಕಾಲಿಗೆ ಗುದ್ದಿದ ಒಳನೋವಾಗಿದ್ದು, ಬಲಕಾಲು  ದಪ್ಪಾಗಿರುತ್ತದೆ. ಹಾಗೂ ಪಿರ್ಯಾದಿದಾರರಿಗೆ ಬಲಹಣೆಗೆ ತರಚಿದ ಗಾಯವಾಗಿದ್ದು, ಪಿರ್ಯಾದಿದಾರರು ಸ್ಥಳೀಯರ ಸಹಾಯದಿಂದ ಟೆನ್ಸ್ ರವರನ್ನು ಒಂದು ವಾಹನದಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಪರೀಕ್ಷಿಸಿದ ಅಲ್ಲಿನ  ವೈದ್ಯರು ಒಳರೋಗಿಯನ್ನಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿರುತ್ತಾರೆ. ಪಿರ್ಯಾದಿದಾರರು ಹೊರ ರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿರುವುದಾಗಿದೆ.  ಢಿಕ್ಕಿ ಹೊಡೆದ ಕಾರಿನಲ್ಲಿ 3 ಮಹಿಳೆಯರಿದ್ದು ಅವರಿಗೆ  ಸಣ್ಣ ಪುಟ್ಟ ಗಾಯಗಳಾಗಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 29/2022 ಕಲಂ 279, 337 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

ಅಸ್ವಾಭಾವಿಕ ಮರಣ ಪ್ರಕರಣ

  • ಮಲ್ಪೆ: ಪಿರ್ಯಾದಿ ಗೋಪಾಲ ಇವರ ತಮ್ಮ  ರವಿ, ಪ್ರಾಯ: 46 ವರ್ಷ ಈತನು  ತೆಂಗಿನ ಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದು. ದಿನಾಂಕ:18-03-2022 ರಂದು  ಕೆಲಸದ ಬಗ್ಗೆ 06:00 ಗಂಟೆಗೆ ಮನೆಯಿಂದ ತೆರಳಿರುತ್ತಾರೆ .  ಪಿರ್ಯಾಧಿದಾರರ ತಮ್ಮ  ಈಶ್ವರ ನಗರದ ನಿವಾಸಿ ಜೈಕರ್  ಎಂಬವರ ಮನೆಯಲ್ಲಿ ತೆಂಗಿನ ಕಾಯಿ ಕೊಯ್ದು  ತೆಂಗಿನ ಮರದಿಂದ ಕೆಳಗೆ ಇಳಿಯುವ ಸಮಯ  ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಏಟಾಗಿ ಚಿಕಿತ್ಸೆಯ ಬಗ್ಗೆ ಹೈಟೆಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು  ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ, ಪಿರ್ಯಾಧಿದಾರರ ತಮ್ಮ ರವಿ ಇವರು  ಬೆಳಿಗ್ಗೆ 7:15 ಗಂಟೆಗೆ  ಈಶ್ವರ ನಗರದ ನಿವಾಸಿ ಜೈಕರ್ ಅವರ ಮನೆಯಲ್ಲಿ ತೆಂಗಿನ ಕಾಯಿ ಕೊಯ್ಯುವಾಗ ಆಕಸ್ಮಿಕವಾಗಿ  ಕೆಳಗೆ ಬಿದ್ದು ,ತಲೆಗೆ ತೀವ್ರತರದ  ಗಾಯ ಉಂಟಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 19/2022 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 18-03-2022 05:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080