ಅಭಿಪ್ರಾಯ / ಸಲಹೆಗಳು

ಅಫಘಾತ ಪ್ರಕರಣ

  • ಕೋಟ: ಪಿರ್ಯಾದಿ ರಾಘವ ಕುಲಾಲ ಇವರು ದಿನಾಂಕ 15/05/2021 ರಂದು ತನ್ನ ಸ್ವಂತ ಕೆಲಸದ ನಿಮಿತ್ತ  ಬಿದ್ಕಲ್ ಕಟ್ಟೆ ಕಡೆಗೆ ಹೊರಟು ಸಾಗುತ್ತಾ ಬಿದ್ಕಲ್ ಕಟ್ಟೆ ಶಾಲೆಯಿಂದ ಸ್ವಲ್ಪ ಹಿಂದೆ ಬೆಳಿಗ್ಗೆ ಸುಮಾರು 10.00 ಗಂಟೆಯ ಸಮಯಕ್ಕೆ ಹೋಗುತ್ತಿರುವಾಗ ಪಿರ್ಯಾದಿದಾರರ ಎದುರಿನಲ್ಲಿ ಬಿದ್ಕಲ್ ಕಟ್ಟೆ ಕಡೆಯಿಂದ ಮೊಳಹಳ್ಳಿ ಕಡೆಗೆ ಬರುತ್ತಿದ್ದ KA20EA0575 ನೇ ಸ್ಕೂಟಿ ಸವಾರನು  ಹಿಂದುಗಡೆ ಹೆಂಗಸನ್ನು ಕುಳ್ಳಿರಿಸಿಕೊಂಡು ತನ್ನ ಬಾಬ್ತು ಸ್ಕೂಟಿಯನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಎದುರಿನಲ್ಲಿದ್ದ  ನಾಯಿಯನ್ನು ನೋಡಿ ನಿರ್ಲಕ್ಷವಾಗಿ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಸ್ಕೂಟಿ ಕೆಳಗೆ ಬಿದ್ದಿದ್ದು,ಪರಿಣಾಮ ಸ್ಕೂಟಿಯ ಹಿಂದೆ  ಕುಳಿತಿದ್ದ ಹೆಂಗಸು ಕೂಡ ಕೆಳಕ್ಕೆ ಬಿದ್ದಿದ್ದು, ಕೂಡಲೇ ಪಿರ್ಯಾದಿದಾರರು  ಹಾಗೂ ಅಲ್ಲಿದ್ದ ಕೆಲವು ಜನರು ಸೇರಿ ಉಪಚರಿಸಿ ನೋಡಲಾಗಿ ಸ್ಕೂಟಿಯ ಸವಾರ ಶಂಕರ ಶೆಟ್ಟಿಯಾಗಿದ್ದು, ಹಿಂದೆ ಕುಳಿತಿದ್ದವರು ಶಂಕರ ಶೆಟ್ಟಿಯ ಹೆಂಡತಿ ಸುಮತಿ ಎಂಬವರಾಗಿದ್ದು, ಸುಮತಿಯವರಿಗೆ  ಈ ಅಪಘಾತದಿಂದ ತಲೆಯ ಹಿಂಬದಿಗೆ ತೀವೃ ರಕ್ತಗಾಯವಾಗಿದ್ದು, ದೇಹಕ್ಕೆ ತರಚಿದ ಗಾಯವಾಗಿದ್ದು, ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ.ಕೂಡಲೇ ಚಿಕಿತ್ಸೆಯ ಬಗ್ಗೆ ಅಂಬುಲೆನ್ಸ ವಾಹನದಲ್ಲಿ ಕೋಟೇಶ್ವರ ಎನ್ ಆರ್ ಆಚಾರ್ಯ ಆಸ್ಪತ್ರೆಗೆ ಹೋಗಿ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ ಎಂ ಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಒಳ ರೋಗಿಯಾಗಿ ದಾಖಲು ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ  ಅಪರಾಧ ಕ್ರಮಾಂಕ 101/2021 ಕಲಂ: 279, 338 ಐಪಿಸಿಯಂತೆ ಪ್ರಕರಣ  ದಾಖಲಿಸಲಾಗಿರುತ್ತದೆ.

ಇತರ ಪ್ರಕರಣ

  • ಬ್ರಹ್ಮಾವರ : ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜ್ಯಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಅಂಗಡಿಗಳ ತಪಾಸಣೆಯ ಬಗ್ಗೆ ಗೋಪಾಲ ಪೂಜಾರಿ, ಎಎಸ್‌ಐ ಬ್ರಹ್ಮಾವರ ಪೊಲೀಸ್ ಠಾಣೆ ಇವರು ದಿನಾಂಕ 18/05/2021 ರಂದು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ ವಾರಂಬಳ್ಳಿ ಗ್ರಾಮದ ಬ್ರಹ್ಮಾವರ ಅಕ್ಷಯ ಫರ್ನಿಚರ್‌‌ರಸ್ತೆ ಎಂಬಲ್ಲಿಗೆ ತೆರಳಿ ಅವಶ್ಯ ವಸ್ತುಗಳ ಖರೀದಿಯ ಅಂಗಡಿಯನ್ನು ತಪಾಸಣೆ ಮಾಡುತ್ತಿರುವಾಗ ಸಮಯ ಬೆಳಿಗ್ಗೆ 8:20 ಗಂಟೆಗೆ ಆರೋಪಿ ಅಜಮ್‌ಪ್ರಾಯ : 29 ವರ್ಷ ತಂದೆ : ಅಲ್ಲಾವುದ್ದೀನ್‌‌ವಾಸ : ಅಕ್ತರ್‌ಮಂಜಿಲ್‌, ಹೊನ್ನಾಳ ಅಂಚೆ ಹಾರಾಡಿ ಗ್ರಾಮ, ಬ್ರಹ್ಮಾವರ ತಾಲೂಕು  ರವರು ಘನ ಕರ್ನಾಟಕ ಸರಕಾರವು ಕೋವಿಡ್‌ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ನಿಯಮ ಉಲ್ಲಂಘಿಸಿ ವಾರಂಬಳ್ಳಿ ಗ್ರಾಮದ, ರಸ್ತೆಯ ಎಡಬದಿ ಕಟ್ಟಡದಲ್ಲಿರುವ IMAGE THE FASHION JUNCTION ಎಂಬ ಹೆಸರಿನ ಅಂಗಡಿಯನ್ನು ತೆರೆದುಕೊಂಡು ಒಳಗಡೆ ಬಟ್ಟೆ ವ್ಯಾಪಾರ ಮಾಡುತ್ತಿರುವುದಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ  ಅಪರಾಧ ಕ್ರಮಾಂಕ 80/2021 ಕಲಂ: 269 ಐಪಿಸಿಯಂತೆ ಪ್ರಕರಣ  ದಾಖಲಿಸಲಾಗಿರುತ್ತದೆ.
  • ಶಿರ್ವ: ದಿನಾಂಕ 18/05/2021  ರಂದು ಶಿರ್ವಾ ಪೊಲೀಸ್ ಠಾಣಾ  ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್‌.ಡಿ.ಎಂ. ರವರು ಠಾಣಾ  ಸಿಬ್ಬಂದಿಯವರೊಂದಿಗೆ  ಕೋವಿಡ್-19 ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಹೊರಡಿಸಿರುವ ಆದೇಶವನ್ನು ಪರಿಷ್ಕರಿಸಿ ದಿನಾಂಕ 10/05/2021 ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ 24/05/2021 ರ ಬೆಳಿಗ್ಗೆ 06:00 ಗಂಟೆಯವರೆಗೆ ಲಾಕ್‌ಡೌನ್‌ಘೋಷಿಸಿದ್ದು, ಈ ಬಗ್ಗೆ ಪೊಲೀಸ್‌ಇಲಾಖೆಗೆ  ಆದೇಶ ಹೊರಡಿಸಿದ್ದು, ಈ ಬಗ್ಗೆ ವಾಹನ ತಪಾಸಣೆ ನಡೆಸುವಂತೆ ಮೇಲಾಧಿಕಾರಿಯವರ ಆದೇಶದಂತೆ ದಿನಾಂಕ 18.05.2021 ರಂದು 11:30 ಗಂಟೆಗೆ ಶಿರ್ವ ಗ್ರಾಮದ ಶಿರ್ವ ಮಸೀದಿ ಬಳಿ ಸಿಬ್ಬಂದಿಯವರೊಂದಿಗೆ  ಸಾರ್ವಜನಿಕ ರಸ್ತೆಯಲ್ಲಿ ವಾಹನ ತಪಾಸಣೆಯಲ್ಲಿರುತ್ತಾ ಅಗತ್ಯ ವಸ್ತುಗಳ ಖರೀದಿ ಬಗ್ಗೆ ಸರಕಾರ ನಿಗದಿಪಡಿಸಿದ ಸಮಯ ಅವಕಾಶದ ಬಳಿಕವೂ ಅನಗತ್ಯವಾಗಿ  ವಾಹನಗಳಲ್ಲಿ ಸಂಚರಿಸುತ್ತಿರುವವರ ವಾಹನಗಳನ್ನು ತಪಾಸಣೆಗಾಗಿ ನಿಲ್ಲಿಸಿ ಪರಿಶೀಲಿಸಿದಲ್ಲಿ ಕಪ್ಪು  ಬಣ್ಣದ ಪಲ್ಸರ್‌ಮೋಟಾರ್ ಸೈಕಲ್ ನೊಂದಣಿ ಸಂಖ್ಯೆ ಕೆಎ 20 EP 2620 ನೇದರಲ್ಲಿ ಸವಾರಿ  ಮಾಡಿಕೊಂಡು ಬರುತ್ತಿದ್ದ  ಸವಾರ ಪ್ರಮೋದ್‌ (27) ತಂದೆ: ದಿ: ಗೋಪಾಲ, ವಾಸ: ಪವಿತ್ರ ನಿಲಯ, ಶಿರ್ವ ಕೊಪ್ಪ, ಶಿರ್ವಅಂಚೆ ಮತ್ತುಗ್ರಾಮ ಕಾಪು ತಾಲೂಕು, ಉಡುಪಿ ಜಿಲ್ಲೆ ಎಂದು ತಿಳಿಸಿದ್ದು, ಸದ್ರಿಯವರ ಓಡಾಟದ ಕಾರಣವನ್ನು ವಿಚಾರಿಸಲಾಗಿ ಯಾವುದೇ ತುರ್ತು ಕಾರಣವಿಲ್ಲದೇ ಅನಗತ್ಯವಾಗಿ ಸಂಚರಿಸುತ್ತಿರುವುದು ಕಂಡು ಬಂದಿರುತ್ತದೆ. ಸದ್ರಿ ಆರೋಪಿಯು ಘನ ಕರ್ನಾಟಕ ಸರಕಾರ ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ನಿಯಮ ಉಲ್ಲಂಘಿಸಿ ಅನಗತ್ಯವಾಗಿ ವಾಹನದಲ್ಲಿ ಸಂಚರಿಸುತ್ತಿರುವುದರಿಂದ ಈ ಬಗ್ಗೆ ಶಿರ್ವ ಪೊಲೀಸ್ ಠಾಣೆ  ಅಪರಾಧ ಕ್ರಮಾಂಕ 28/2021 ಕಲಂ: 269 ಐಪಿಸಿಯಂತೆ ಪ್ರಕರಣ  ದಾಖಲಿಸಲಾಗಿರುತ್ತದೆ.

 ಅಸ್ವಾಭಾವಿಕ ಮರಣ ಪ್ರಕರಣ

  • ಉಡುಪಿ : ಉಡುಪಿ ತಾಲೂಕು  76 ನೇ ಬಡಗುಬೆಟ್ಟು ಗ್ರಾಮದ ಇಂದಿರಾ ನಗರ, ಮನೆ ನಂಬ್ರ 2ಬಿ-79, 4ನೇ ಕ್ರಾಸ್ ಎಂಬಲ್ಲಿ ವಾಸವಾಗಿರುವ ನಾರಾಯಣ ಆಚಾರ್ಯ (ಪ್ರಾಯ 77 ವರ್ಷ) ಎಂಬುವರು ಮಾನಸಿಕವಾಗಿ ನೊಂದು  ಜೀವನದಲ್ಲಿ  ಜಿಗುಪ್ಸೆ  ಹೊಂದಿ,  ದಿನಾಂಕ: 17/05/2021 ರಂದು  ರಾತ್ರಿ  9:30  ಗಂಟೆಯಿಂದ  10:45  ಗಂಟೆಯ  ಮಧ್ಯಾವಧಿಯಲ್ಲಿ ಮನೆಯ ಹಿಂಬದಿಯಲ್ಲಿ ನೇಣು  ಬಿಗಿದುಕೊಂಡು  ಆತ್ಮಹತ್ಯೆ  ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆ ಯುಡಿಆರ್ 20/2021 ಕಲಂ 174 ಸಿಆರ್‌ಪಿಸಿ  ರಂತೆ ಪ್ರಕರಣ  ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 18-05-2021 06:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080