ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕುಂದಾಪುರ: ದಿನಾಂಕ 17/05/2021 ರಂದು ಸಂಜೆ 7:00  ಗಂಟೆಗೆ  ಕುಂದಾಪುರ  ತಾಲೂಕಿನ, ವಡೇರಹೋಬಳಿ   ಗ್ರಾಮದ  ಶಾಸ್ತ್ರಿಸರ್ಕಲ್‌‌  ಫ್ಲೈ ಓವರ್‌‌‌‌ NH 66 ರಸ್ತೆಯಲ್ಲಿ,  ಯಾವುದೋ ನೊಂದಣಿ ನಂಬ್ರ ತಿಳಿದು ಬಾರದ ವಾಹನದ ಚಾಲಕ, ತನ್ನ ವಾಹನವನ್ನು ತಲ್ಲೂರು ಕಡೆಯಿಂದ ಉಡುಪಿ ಕಡೆಗೆ ಅತೀವೇಗ  ಹಾಗೂ  ನಿರ್ಲಕ್ಷ್ಯತನದಿಂದ  ಚಾಲನೆ  ಮಾಡಿಕೊಂಡು ಬಂದು, ರಸ್ತೆ ದಾಟುತ್ತಿದ್ದ  ಅಪರಿಚಿತ ಗಂಡಸು ಪ್ರಾಯ ಸುಮಾರು 70 ಇವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೇ ಉಡುಪಿ ಕಡೆಗೆ ಹೋಗಿರುತ್ತಾನೆ. ಈ ಅಪಘಾತದಿಂದ ಅಪರಿಚಿತ ವ್ಯಕ್ತಿಯ ತಲೆಗೆ, ಎರಡೂ ಕಾಲುಗಳಿಗೆ  ಗಂಭೀರ ರಕ್ತಗಾಯ ಹಾಗೂ ಒಳಜಕಂ ಗಾಯವಾಗಿ ಸ್ಥಳದಲ್ಲಿಯೇ  ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 54/2021 ಕಲಂ: 279, 304 (ಎ) ಐಪಿಸಿ & 134 (A) & (B) R/W 187 IMV ACT ರಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಮಣಿಪಾಲ: ಪಿರ್ಯಾದಿದಾರರಾದ ಪುಷ್ಪ ಪೂಜಾರಿ (40), ಗಂಡ: ಶೇಖರ್ ಪೂಜಾರಿ, ವಾಸ: ಪಾಲನ್ ನಿವಾಸ, ಮಟ್ಟು ಕೊಪ್ಲ, ಕಾಪು ತಾಲೂಕು ಉಡುಪಿ ಇವರ ತಮ್ಮ ಗಣೇಶ(37) ಇವರಿಗೆ 2-3 ದಿನಗಳ ಹಿಂದೆ ಕೆಮ್ಮು ಕಾಣಿಸಿಕೊಂಡಿದ್ದು ,ಇಂದ್ರಾಳಿ ಮತ್ತು ಕಟಪಾಡಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದುಕೊಂಡು ತನ್ನ ಹೆಂಡತಿಯೊಂದಿಗೆ  ಹೆಂಡತಿ ಯ ಮನೆಗೆ ಹೋಗಿದ್ದು,  ದಿನಾಂಕ 17/05/2021 ರಂದು ಬೆಳಿಗ್ಗೆ 4:00 ಗಂಟೆಗೆ   ಗಣೇಶ ರವರಿಗೆ ವಿಪರೀತ ಕೆಮ್ಮ ಕಾಣಿಸಿಕೊಂಡಿದ್ದರಿಂದ  ಅವರ  ಭಾಮೈದ  ಪ್ರಿಯೇಶ್‌  ರವರು  ಗಣೇಶ್‌ ಅವರನ್ನು  ಚಿಕಿತ್ಸೆಗಾಗಿ  ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರಲ್ಲಿ ತೋರಿಸಿದಾಗ ವೈದ್ಯಾಧಿಕಾರಿಯವರು ಗಣೇಶ್‌ ರವರನ್ನು  ಪರೀಕ್ಷಿಸಿ  ಈಗಾಗಲೇ  ಗಣೇಶ್‌ ರವರು  ಮೃತಪಟ್ಟಿರುವುದಾಗಿದೆ  ತಿಳಿಸಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 17/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರ ಪ್ರಕರಣಗಳು

  • ಬೈಂದೂರು: ದಿನಾಂಕ 15/05/2021 ರಂದು ರಾತ್ರಿ ವಿಪರೀತ ಗಾಳಿ ಮಳೆಯಿಂದಾಗಿ ರಾಗಿಹಕ್ಲು ಕ್ರಾಸ್ ಬಳಿ ಅರೆಹೊಳೆ ಕ್ರಾಸ್ ನಿಂದ ಹೇರೂರು ಕಡೆಗೆ ಹೋಗುವ ಪಿಡಬ್ಲ್ಯೂಡಿ ರಸ್ತೆಯ ಬದಿಯಲ್ಲಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು 2 ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿದ್ದು, ದಿನಾಂಕ 17/05/2021 ರಂದು ಮೆಸ್ಕಾಂ ಇಲಾಖೆಯಿಂದ ಸದ್ರಿ ತುಂಡಾದ 2 ಕಂಬಗಳ ಬದಲಿಗೆ 2 ಹೊಸ ಕಂಬಗಳನ್ನು ಹಾಕಿ ವಿದ್ಯುತ್ ತಂತಿಗಳನ್ನು ಅಳವಡಿಸುವ ಸಮಯ ಮೆಸ್ಕಾಂ ಅಧಿಕಾರಿಗಳು, ದುರಸ್ತಿ ಕಾರ್ಯವನ್ನು ಪಡೆದ ಗುತ್ತಿಗೆದಾರರು ಹಾಗೂ ದುರಸ್ತಿ ಮಾಡುತ್ತಿದ್ದ ಕೆಲಸಗಾರರು ದುರಸ್ತಿ ಕಾರ್ಯವನ್ನು ಮಾಡುವಾಗ ರಸ್ತೆಯು ಹಾದು ಹೋಗುವ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾದ ಯಾವುದೇ ಸೂಚನಾ ಫಲಕ, ಸಿಬ್ಬಂದಿಯವರನ್ನು ನೇಮಿಸದೇ ತೀವ್ರ ನಿರ್ಲಕ್ಷ್ಯತನ ವಹಿಸಿದ ಪರಿಣಾಮ ದುರಸ್ತಿ ಕಾರ್ಯ ಮಾಡುತ್ತಿದ್ದ ಕೆಲಸಗಾರರು 3 ವಿದ್ಯುತ್ ತಂತಿಯನ್ನು ಕಂಬಕ್ಕೆ ಜೋಡಿಸಲು ಮೇಲೆ ಎತ್ತಿ ಕಂಬಕ್ಕೆ ಜೋಡಿಸುತ್ತಿರುವಾಗ 11:50 ಗಂಟೆಗೆ 3 ವಿದ್ಯುತ್ ತಂತಿಗೆ ಕಟ್ಟಿದ ಸಣ್ಣ ತಂತಿ ತುಂಡಾಗಿ ಒಮ್ಮೆಲೆ ಕೆಳಗೆ ಬಂದು ರಸ್ತೆಗೆ ಅಡ್ಡಲಾಗಿ ಜೋತು ಬಿದ್ದಾಗ ಅದೇ ರಸ್ತೆಯಲ್ಲಿ ಮೋಟಾರು ಸೈಕಲ್ ನಂಬ್ರ KA-20-U-8967 ನಲ್ಲಿ ಬರುತ್ತಿದ್ದ ಪಿರ್ಯಾದಿದಾರರಾದ ಜಗನ್ನಾಥ ಶೆಟ್ಟಿ (56), ತಂದೆ: ದಿ. ಮಹಾಬಲ ಶೆಟ್ಟಿ, ವಾಸ: ಸ್ವಾತಿ ನಿಲಯ ಯರುಕೋಣೆ ಹೇರೂರು ಗ್ರಾಮ ಬೈಂದೂರು ತಾಲೂಕು ಇವರ ಅಣ್ಣ ಶೇಖರ ಶೆಟ್ಟಿ ರವರ ಕುತ್ತಿಗೆಯ ಭಾಗಕ್ಕೆ ಸಿಕ್ಕಿ ಕುತ್ತಿಗೆಯು ಮುರಿದು ರಸ್ತೆಯಲ್ಲಿ ಸ್ಥಳದಲ್ಲಿಯೇ ಬಿದ್ದು ಮೃತಪಟ್ಟಿರುವುದಾಗಿದೆ. .ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 92/2021 ಕಲಂ: 304(A) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕೋಟ: ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಈ ಪ್ರಕರಣದ ಸಾರಾಂಶವೇನೆಂದರೆ ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜ್ಯಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಸಮಯದಲ್ಲಿ ಅವಶ್ಯ ವಸ್ತುಗಳ ಖರೀದಿಯ ಬಗ್ಗೆ ಇರುವ ಜಿಲ್ಲಾಧಿಕಾರಿಗಳ ಆದೇಶದಂತೆ ಅಂಗಡಿಗಳ ತಪಾಸಣೆಯ ಬಗ್ಗೆ ಸಂತೋಷ ಬಿ.ಪಿ , ಪೊಲೀಸ್ ಉಪನಿರೀಕ್ಷಕರು, ಕೋಟ ಪೊಲೀಸ್ ಠಾಣೆ ಇವರು 17/05/2021 ರಂದು ಸಿಬ್ಬಂದಿಯವರೊಂದಿಗೆ ಬ್ರಹ್ಮಾವರ ತಾಲೂಕು  ತೆಕ್ಕಟ್ಟೆ   ಗ್ರಾಮದ ಪೇಟೆಯ ಬಳಿ  ತೆರಳಿ ಅವಶ್ಯ ವಸ್ತುಗಳ ಖರೀದಿಯ ಅಂಗಡಿಯನ್ನು ತಪಾಸಣೆ ಮಾಡುತ್ತಿರುವಾಗ ಬೆಳಿಗ್ಗೆ 08:30 ಗಂಟೆಗೆ ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ತೆಕ್ಕಟ್ಟೆ ಪೇಟೆಯಲ್ಲಿರುವ ಮಂಜುನಾಥ ಮೊಬೈಲ್ ಅಂಗಡಿ ತೆರೆದುಕೊಂಡಿದ್ದು  ಗ್ರಾಹಕರೊಂದಿಗೆ  ವ್ಯವಹಾರ ನಡೆಸುತ್ತಿರುವುದು ಕಂಡು ಬಂದಿರುತ್ತದೆ. ಅಂಗಡಿಯ ಒಳಗಡೆ ಕುಳಿತುಕೊಂಡಿದ್ದ ವ್ಯಕ್ತಿಯಲ್ಲಿ ವಿಚಾರಿಸಲಾಗಿ ತಾನು ಅಂಗಡಿಯ ಮಾಲಕನಾಗಿರುವುದಾಗಿ ತಿಳಿಸಿರುತ್ತಾನೆ. ಆತನ ಹೆಸರು ಕೇಳಲಾಗಿ ಹರೀಶ  ಪ್ರಾಯ: 36 ವರ್ಷ, ತಂದೆ: ಗೋಪಾಲ ,ವಾಸ: ಬೀಜಾಡಿ ಕೋಟೆಶ್ವರ ಗ್ರಾಮ  ,ಕುಂದಾಪುರ ತಾಲೂಕು  ಎಂಬುದಾಗಿ ತಿಳಿಸಿದ್ದು ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ ನಿಯಮ ಉಲ್ಲಂಘಿಸಿ ತನ್ನ ಮೊಬೈಲ್  ಅಂಗಡಿಯನ್ನು ತೆರೆದುಕೊಂಡಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 97/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕೋಟ: ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜ್ಯಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಸಮಯದಲ್ಲಿ ಅವಶ್ಯ ವಸ್ತುಗಳ ಖರೀದಿಯ ಬಗ್ಗೆ ಇರುವ ಜಿಲ್ಲಾಧಿಕಾರಿಗಳ ಆದೇಶದಂತೆ ಅಂಗಡಿಗಳ ತಪಾಸಣೆಯ ಬಗ್ಗೆ ಸಂತೋಷ ಬಿ.ಪಿ , ಪೊಲೀಸ್ ಉಪನಿರೀಕ್ಷಕರು, ಕೋಟ ಪೊಲೀಸ್ ಠಾಣೆ ಇವರು  17/05/2021 ರಂದು ಸಿಬ್ಬಂದಿಯವರೊಂದಿಗೆ ತೆಕ್ಕಟ್ಟೆ  ಗ್ರಾಮದ ಪೇಟೆಯ ಬಳಿ  ತೆರಳಿ ಅವಶ್ಯ ವಸ್ತುಗಳ ಖರೀದಿಯ ಅಂಗಡಿಯನ್ನು ತಪಾಸಣೆ ಮಾಡುತ್ತಿರುವಾಗ ಸಮಯ ಬೆಳಿಗ್ಗೆ 08.30 ಗಂಟೆಗೆ ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ತೆಕ್ಕಟ್ಟೆ ಪೇಟೆಯಲ್ಲಿರುವ ಶಾಂತಲಾ ಬೇಕರಿ ತೆರೆದುಕೊಂಡಿದ್ದು  ಗ್ರಾಹಕರೊಂದಿಗೆ  ವ್ಯವಹಾರ ನಡೆಸುತ್ತಿರುವುದು ಕಂಡು ಬಂದಿರುತ್ತದೆ. ಅಂಗಡಿಯ ಒಳಗಡೆ ಕುಳಿತುಕೊಂಡಿದ್ದ ವ್ಯಕ್ತಿಯಲ್ಲಿ ವಿಚಾರಿಸಲಾಗಿ ತಾನು ಅಂಗಡಿಯ ಮಾಲಕನಾಗಿರುವುದಾಗಿ ತಿಳಿಸಿರುತ್ತಾನೆ. ಆತನ ಹೆಸರು ಕೇಳಲಾಗಿವಿ ಶ್ವನಾಥ (65),ತಂದೆ: ಬಸವ ಶೆಟ್ಟಿ,  ವಾಸ: ಮಲ್ಯಾಡಿ ಕಾವಡಿ ಮನೆ  ತೆಕ್ಕಟ್ಟೆ ಗ್ರಾಮ,ಕುಂದಾಪುರ ತಾಲೂಕು ಎಂಬುದಾಗಿ ತಿಳಿಸಿದ್ದು ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ ನಿಯಮ ಉಲ್ಲಂಘಿಸಿ ತನ್ನ ಬೇಕರಿ  ಅಂಗಡಿಯನ್ನು  ತೆರೆದುಕೊಂಡಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 98/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕೋಟ: ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜ್ಯಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಸಮಯದಲ್ಲಿ ಅವಶ್ಯ ವಸ್ತುಗಳ ಖರೀದಿಯ ಬಗ್ಗೆ ಇರುವ ಜಿಲ್ಲಾಧಿಕಾರಿಗಳ ಆದೇಶದಂತೆ ಅಂಗಡಿಗಳ ತಪಾಸಣೆಯ ಬಗ್ಗೆ ಸಂತೋಷ ಬಿ.ಪಿ , ಪೊಲೀಸ್ ಉಪನಿರೀಕ್ಷಕರು, ಕೋಟ ಪೊಲೀಸ್ ಠಾಣೆ ಇವರು   17/05/2021 ರಂದು ಸಿಬ್ಬಂದಿಯವರೊಂದಿಗೆ ಕುಂದಾಪುರ ತಾಲೂಕು ಹೊಂಬಾಡಿ ಮಂಡಾಡಿ  ಗ್ರಾಮದ ಹುಣ್ಸೆಮಕ್ಕಿ ಪೇಟೆಯ ಬಳಿ  ತೆರಳಿ ಅವಶ್ಯ ವಸ್ತುಗಳ ಖರೀದಿಯ ಅಂಗಡಿಯನ್ನು ತಪಾಸಣೆ ಮಾಡುತ್ತಿರುವಾಗ ಸಮಯ ಬೆಳಿಗ್ಗೆ 09.00 ಗಂಟೆಗೆ ಕುಂದಾಪುರ ತಾಲೂಕು ಹೊಂಬಾಡಿ ಮಂಡಾಡಿ  ಗ್ರಾಮದ ಹುಣ್ಸೆಮಕ್ಕಿ ಪೇಟೆ ಬಳಿಯಿರುವ  ಜೆ.ಬಿ ಅಯ್ಯಂಗಾರ್  ಬೇಕರಿ  ತೆರೆದುಕೊಂಡಿದ್ದು  ಗ್ರಾಹಕರೊಂದಿಗೆ  ವ್ಯವಹಾರ ನಡೆಸುತ್ತಿರುವುದು ಕಂಡು ಬಂದಿರುತ್ತದೆ. ಅಂಗಡಿಯ ಒಳಗಡೆ ಕುಳಿತುಕೊಂಡಿದ್ದ ವ್ಯಕ್ತಿಯಲ್ಲಿ ವಿಚಾರಿಸಲಾಗಿ ತಾನು ಅಂಗಡಿಯ ಮಾಲಕನಾಗಿರುವುದಾಗಿ ತಿಳಿಸಿರುತ್ತಾನೆ. ಆತನ ಹೆಸರು ಕೇಳಲಾಗಿ ಯೊಗೀಶ (35), ತಂದೆ: ಬೊಮ್ಮ ಲಿಂಗಯ್ಯ, ವಾಸ: ಹುಣ್ಸೆಮಕ್ಕಿ ಹೊಂಬಾಡಿ ಮಂಡಾಡಿ  ಗ್ರಾಮ,ಕುಂದಾಪುರ ತಾಲೂಕು ಎಂಬುದಾಗಿ ತಿಳಿಸಿದ್ದು ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ ನಿಯಮ ಉಲ್ಲಂಘಿಸಿ ತನ್ನ ಬೇಕರಿ  ಅಂಗಡಿಯನ್ನು  ತೆರೆದುಕೊಂಡಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 99/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕೋಟ: ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021ರಿಂದ 12/05/2021 ರ ವರೆಗೆ ಕೋವಿಡ್  ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು,  ಈ ಬಗ್ಗೆ ಸಂತೋಷ ಬಿ.ಪಿ, ಪೊಲೀಸ್ ಉಪನಿರೀಕ್ಷಕರು, ಕೋಟ ಪೊಲೀಸ್ ಠಾಣೆ ಇವರು ದಿನಾಂಕ 17/05/2021 ರಂದು  ಬೆಳಿಗ್ಗೆ 10:30 ಗಂಟೆಗೆ ಸಿಬ್ಬಂದಿಯವರೊಂದಿಗೆ ರೌಂಡ್ಸ ಕರ್ತವ್ಯದಲ್ಲಿರುವಾಗ ಬ್ರಹ್ಮಾವರ ತಾಲೂಕು ಪಾರಂಪಳ್ಳಿ  ಗ್ರಾಮದ ಸಾಲಿಗ್ರಾಮ  ಆಂಜನೇಯ ದೇವಸ್ಥಾನದ  ಬಳಿಯಲ್ಲಿ  KA-20-EV-1424 ನೇ ನಂಬ್ರದ ಮೋಟಾರ್ ಸೈಕಲ್  ಸವಾರ ಅಬ್ದುಲ್ ಜಲೀಲ್  ಯಾವುದೇ  ಸಮರ್ಪಕ ಕಾರಣ ಇಲ್ಲದೇ ಅನಗತ್ಯ ಓಡಾಟ ಮಾಡಿ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 100 /2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಗಂಗೊಳ್ಳಿ: ದಿನಾಂಕ 17/05/2021 ರಂದು ವೆಂಕಟೇಶ ಗೊಲ್ಲ, ಸಹಾಯಕ ಪೊಲೀಸ್ ಉಪನಿರೀಕ್ಷಕರು, ಗಂಗೊಳ್ಳಿ ಪೊಲೀಸ್ ಠಾಣೆ ಇವರು ಸಿಬ್ಬಂದಿಯವರೊಂಧಿಗೆ ಕರ್ತವ್ಯ ನಿರ್ವಹಿಸಿಕೊಂಡಿರುವಾಗ 16:00 ಗಂಟೆಗೆ  ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮದ ನಡುಪಳ್ಳಿ ಎಂಬಲ್ಲಿ 1] KA-20-EJ-3278 YAMAHA FZS ನೇ ಮೋಟಾರ್ ಸೈಕಲ್ ಸವಾರ,  2] KA-20-EN-6607 BAJAJ V-15 ನೇ ಮೋಟಾರ್ ಸೈಕಲ್ ಸವಾರ, ಹಾಗೂ 3]  KA-21-L-8244 HONDA MATRIX ನೇ ಮೋಟಾರ್ ಸೈಕಲ್ ಸವಾರ ಸಕಾರಣವಿಲ್ಲದೇ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸುವ ಮೂಲಕ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತವು ಕೋವಿಡ್-19 ತಡೆಗಟ್ಟಲು ಹೊರಡಿಸಿದ ಲಾಕ್‌ಡೌನ್ ಆದೇಶ/ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದು, ಮಾನವನ ಪ್ರಾಣಕ್ಕೆ ಅಪಾಯಕಾರಿಯಾದ ಕೋವಿಡ್-19 ಸೋಂಕು ಹರಡುವ ಸಂಭವ ಇದೆ ಎಂದು ತಿಳಿದೂ ನಿರ್ಲಕ್ಷತನ ತೋರಿರುವುದಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 45/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.   
  • ಶಂಕರನಾರಾಯಣ: ದಿನಾಂಕ 17/05/2021 ರಂದು 17:15 ಗಂಟೆಗೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಧರ್ಮದೇವ ಪೆಟ್ರೋಲ್ ಬಂಕ್ ಎದುರುಗಡೆ ಕುಂದಾಪುರ- ಶಿವಮೊಗ್ಗ ರಾಜ್ಯ ರಸ್ತೆಯಲ್ಲಿ ಆರೋಪಿಗಳಾಧ 1. KA-20-EK-6783, 2.KA-20-EN-7698, 3.KA-20-EB-0641, 4.KA-03-KB-6420ನೇ ನಂಬ್ರದ  ಮೋಟಾರ್ ಸೈಕಲ್ ಸವಾರರು ಸೇರಿ ಕೋವಿಡ್ -19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ  ಕಾರಣದಿಂದ ಕರೋನಾ ಸೊಂಕನ್ನು ತಡೆಗಟ್ಟಲು ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಜಿಲ್ಲಾಡಳಿತ   ನಿಷೇದಾಜ್ಜೆಯನ್ನು ಜಾರಿಗೊಳಿಸಿದ್ದು, ಉಡುಪಿ ಜಿಲ್ಲಾಡಳಿತದ ಹಾಗೂ ಘನ  ಸರಕಾರದ ಆದೇಶವನ್ನು ಉಲ್ಲಂಘಿಸಿ  ಯಾವುದೇ ಮುನ್ನೆಚ್ಚರಿಕೆ   ಕ್ರಮ ಕೈಗೊಳ್ಳದೆ, ಸಾಮಾಜಿಕ ಅಂತರ ಪಾಲಿಸದೇ ಸಾರ್ವಜನಿಕ  ರಸ್ತೆಯಲ್ಲಿ ಮೋಟಾರ್  ಸೈಕಲ್  ನಿಲ್ಲಿಸಿಕೊಂಡು  ಗುಂಪು ಗೂಡಿ ಕೊಂಡು ನಿಂತುಕೊಂಡಿರುವುದಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 54/2021 ಕಲಂ: 269 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕಾರ್ಕಳ: ಮಾನ್ಯ ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ಕೋವಿಡ್ ಕರ್ಪ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಪ್ಯೂ ಜಾರಿಗೊಳಿಸುವ ಬಗ್ಗೆ ಪೋಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಸಮಯದಲ್ಲಿ ಅನಗತ್ಯವಾಗಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ, ಮಧು  ಬಿ.ಇ, ಪೋಲೀಸ್ ಉಪನಿರೀಕ್ಷಕರು, ಕಾರ್ಕಳ ನಗರ ಪೊಲೀಸ್ ಠಾಣೆ ಇವರು ದಿನಾಂಕ 17/05/2021 ರಂದುಸಿಬ್ಬಂದಿಯವರೊಂದಿಗೆ ಕಾರ್ಕಳ ಕಸಬ  ಗ್ರಾಮದ ಸರ್ವಜ್ಞ ವೃತ್ತದ ಬಳಿ  ಸಾರ್ವಜನಿಕ ರಸ್ತೆಯಲ್ಲಿ  ಸಂಜೆ 17:00 ಗಂಟೆಗೆ ಅನಗತ್ಯವಾಗಿ ವಾಹನಗಳ ಓಡಾಟದ ಬಗ್ಗೆ ವಾಹನಗಳನ್ನು ತಪಾಸಣೆ ಮಾಡುತ್ತಿರುವಾಗ ಅನಗತ್ಯವಾಗಿ ಓಡಾಡುತ್ತಿದ್ದ KA-18-Q-1043 ನೇ ನಂಬ್ರದ ಟಿವಿಎಸ್ ಕಂಪೆನಿ ತಯಾರಿಕೆಯ ದ್ವಿಚಕ್ರ ವಾಹನವನ್ನು ತಡೆದು ನಿಲ್ಲಿಸಿ ಆತನಲ್ಲಿ ವಿಚಾರಿಸಲಾಗಿ ಸಮಂಜಸವಾಗಿ ಉತ್ತರಿಸದೇ ಇದ್ದುದ್ದಲ್ಲದೆ   ಆಪಾದಿತನಿಗೆ ಘನ ಕರ್ನಾಟಕ ಸರಕಾರವು ಕೋವಿಡ್ ಮಹಾಮಾರಿ ಕರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ನಿಯಮಗಳ ಬಗ್ಗೆ ತಿಳುವಳಿಕೆ ಇದ್ದರೂ ಅನಗತ್ಯವಾಗಿ ಸರಕಾರ ಮತ್ತು ಜಿಲ್ಲಾಡಳಿತ ಆದೇಶ, ಕೋವಿಡ್ ನಿಯಮ ಉಲ್ಲಂಘಿಸಿರುವುದಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 57/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕಾರ್ಕಳ: ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ಕೋವಿಡ್ ಕರ್ಪ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಪ್ಯೂ ಜಾರಿಗೊಳಿಸುವ ಬಗ್ಗೆ ಪೋಲೀಸ್ ಇಲಾಖೆಗೆ ಆದೇಶ ಹೊರಡಿಸಿರುತ್ತದೆ. ಈ ಸಮಯದಲ್ಲಿ  ಬೆಳಿಗ್ಗೆ 6:00 ಗಂಟೆಯಿಂದ ಮದ್ಯಾಹ್ನ 12:00 ಗಂಟೆಯವರೆಗೆ ಜಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ ಇರುತ್ತದೆ. ಅಂಗಡಿ ಮಾಲಿಕ ಸಾಣೂರು ಗ್ರಾಮದ ಕುಂಟಲ್‌ಪಾಡಿ ನಿವಾಸಿ ಪ್ರಕಾಶ (59), ತಂದೆ: ದಿವಂಗತ ಸಂಜೀವ, ವಾಸ: ಕುಂಟಲ್‌ಪಾಡಿ,  ಸಾಣೂರು ಗ್ರಾಮ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರು ದಿನಾಂಕ 17/05/2021 ರಂದು ಸಂಜೆ 18:30 ಗಂಟೆಗೆ ಕಾರ್ಕಳ ತಾಲೂಕು ಸಾಣೂರು ಗ್ರಾಮದ ಕುಂಟಲ್‌ಪಾಡಿ ಎಂಬಲ್ಲಿ ತನ್ನ ಮಾಲಕತ್ವದ ಅಂಗಡಿಯನ್ನು ತೆರೆದು ವ್ಯಾಪಾರ ಮಾಡುತ್ತಿರುವುದಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 58/2021 ಕಲಂ:  269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಹೆಬ್ರಿ: ದಿನಾಂಕ 17/05/2021 ರಂದು ಮಹೇಶ.ಟಿ.ಎಂ, ಪೊಲೀಸ್ ಉಪನಿರೀಕ್ಷಕರು, ಹೆಬ್ರಿ ಪೊಲೀಸ್ ಠಾಣೆ ಇವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ನಲ್ಲಿರುವಾಗ ಬಂದ ಮಾಹಿತಿಯಂತೆ ಹೆಬ್ರಿ ಗ್ರಾಮದ ವಿನು ನಗರದಲ್ಲಿರುವ ವಿಜಯ ಲಕ್ಷ್ಮಿ ಬಾರ್ ಆ್ಯಂಡ್ ರೆಸ್ಟೊರೆಂಟ್ ನ ಹಿಂಬಾಗಕ್ಕೆ ರಾತ್ರಿ 20:00 ಗಂಟೆಗೆ ಅಲ್ಲಿಗೆ ಹೋಗಿ ನೋಡಿದಾಗ ಎರಡು ವ್ಯಕ್ತಿಗಳು ಎರಡು ರಟ್ಟಿನ ಬಾಕ್ಸ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿ ಬಂದ ವ್ಯಕ್ತಿಗಳಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ಖಚಿತ ಪಡಿಸಿಕೊಂಡು ಸಿಬ್ಬಂದಿಗಳ ಸಹಾಯದಿಂದ ದಾಳಿ ಮಾಡಿ ಆರೋಪಿತರಾದ ವೆಂಕಟೇಶ್ ಮತ್ತು ವಿಠಲ ಹೆಗ್ಡೆ ಇವರನ್ನು ವಶಕ್ಕೆ ಪಡೆದು ಅವರ ಬಳಿವಿದ್ದ ಎರಡು ರಟ್ಟಿನ ಬಾಕ್ಸ್ ನಲ್ಲಿರುವ ಮದ್ಯದ ಬಗ್ಗೆ ಅವರಲ್ಲಿ ಮಾರಾಟ ಮಾಡಲು ಮತ್ತು ದಾಸ್ತಾನು ಇಡಲು ಪರವಾನಿಗೆ ಇದೆಯೇ ಎಂದು ಕೇಳಿದಾಗ ಇಲ್ಲ ಎಂದು ತಿಳಿಸಿರುತ್ತಾರೆ. ಎರಡು ರಟ್ಟಿನ ಬಾಕ್ಸ್ ನಲ್ಲಿರುವ Mysore lancer whisky ಎಂದು ಬರೆದಿರುವ ಮದ್ಯ ತುಂಬಿರುವ 180 ಎಂ.ಎಲ್ ನ ಪ್ಯಾಕೆಟ್ ಒಟ್ಟು 20 ಮತ್ತು Original Choice Deluxe whisky ಎಂದು ಬರೆದಿರುವ ಮದ್ಯ ತುಂಬಿರುವ 180 ಎಂ.ಎಲ್ ನ ಪ್ಯಾಕೆಟ್ ಒಟ್ಟು 48 ಇದ್ದು ಇವುಗಳ ಒಟ್ಟು ಮೌಲ್ಯ 4,777/- ರೂಪಾಯಿ ಅಗಿರುತ್ತದೆ. ಮತ್ತು ಮಾರಾಟದಿಂದ ಸಂಗ್ರಹವಾದ ನಗದು 1,200/- ರೂಪಾಯಿ ಮತ್ತು ಎರಡು ರಟ್ಟಿನ ಬಾಕ್ಸ್ ಇವುಗಳನ್ನು ಸ್ವಾದೀನಪಡಿಸಿಕೊಂಡಿರುವುದಾಗಿದೆ. ಆರೋಪಿತರುಗಳು ಕೋವೀಡ್ -19 ವೈರಸ್ ಬಗ್ಗೆ ಮಾನ್ಯ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತವು ಲಾಕ್ ಡೌನ್ ಅದೇಶವನ್ನು ಉಲ್ಲಂಘನೆ ಮಾಡಿ ಮದ್ಯವನ್ನು ಸಂಗ್ರಹ ಮಾಡಿ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 26/2021 ಕಲಂ: 269 ಐಪಿಸಿ ಮತ್ತು ಕಲಂ: 32, 34 KE ACT ರಂತೆ ಪ್ರಕರಣ ದಾಖಲಾಗಿರುತ್ತದೆ.    

ಇತ್ತೀಚಿನ ನವೀಕರಣ​ : 18-05-2021 10:26 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080