ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ 

  • ಅಮಾಸೆಬೈಲು: ದಿನಾಂಕ 18/09/2022 ರಂದು ಸುಬ್ಬಣ್ಣ ಬಿ, ಪೊಲೀಸ್ ಉಪನಿರೀಕ್ಷಕರು,ಅಮಾಸೆಬೈಲು ಪೊಲೀಸ್ ಠಾಣೆ ಇವರು ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ಹೊಸಂಗಡಿ ಗ್ರಾಮದ ಕೆ ಪಿ ಸಿ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಅನುಮಾನಾಸ್ಪದವಾಗಿ ನಿಷೇದಿತ ಮಾದಕ ದ್ರವ್ಯವಾದ ಗಾಂಜಾವನ್ನು ಸೇವಿಸುತ್ತಿದ್ದಾನೆ ಎಂಬ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಒಬ್ಬಾತನು ಅಮಲಿನಲ್ಲಿ ತೂರಾಡುತ್ತಿರುವಂತೆ ಕಂಡು ಬಂದಿದ್ದು ನಂತರ ಆತನನ್ನು ವಿಚಾರಿಸಲಾಗಿ ಮಹಮದ್ ಸುಹೈಲ್(25) ಎಂಬುದಾಗಿ ತಿಳಿಸಿದ್ದು ಆತನನ್ನು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಆತನು ಗಾಂಜಾ ಸೇವಿಸಿದ ಬಗ್ಗೆ ದೃಢ ಪತ್ರ ನೀಡಿರುವುದಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 21/2022 ಕಲಂ: 27(b) ಎನ್‌.ಡಿ.ಪಿ.ಎಸ್‌ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಹಿರಿಯಡ್ಕ: ದಿನಾಂಕ 17/09/2022 ರಂದು ಕಿಶೋರ್ (40), ತಂದೆ:ನಾರಾಯಣ ಸಾಲಿಯಾನ್ ,ವಾಸ: ಶಾಂತಿಬೆಟ್ಟು, ದರ್ಖಾಸು ಹೌಸ್, ಕಣಜಾರು, ಕಣಜಾರು ಗ್ರಾಮ, ಕಾರ್ಕಳ ತಾಲೂಕು ಇವರು ಮನೆಯಲ್ಲಿರುವಾಗ ಸಂಜೆ 5:30 ಗಂಟೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬೆನ್ನಿನಲ್ಲಿ ಬ್ಯಾಗನ್ನು ಹಾಕಿಕೊಂಡು ಬಂದು ಅವರಲ್ಲಿ ಹಿಂದಿ ಭಾಷೆಯಲ್ಲಿ ನಿಮ್ಮಲ್ಲಿ ಚಿನ್ನವಿದ್ದರೆ ಕೊಡಿ ಅದನ್ನು ಪಾಲಿಶ್ ಮಾಡಿ ಕೊಡುತ್ತೇವೆ ಎಂದು ಹೇಳಿದ್ದು, ಅದಕ್ ಕೆಅವರು ಅವರಲ್ಲಿ ನೀವು ಯಾವ ರೀತಿಯಲ್ಲಿ ಚಿನ್ ನಪಾಲಿಶ್ ಮಾಡುತ್ತೀರಿ ಎಂದು ಕೇಳಿದಾಗ ಅವರು ಅವರಲ್ಲಿದ್ದ ಬ್ಯಾಗನ್ನು ತೆರೆದು ತೋರಿಸಿದ್ದು, ಆ ಬ್ಯಾಗ್ ಗಳಲ್ಲಿ ಕೆಲವು ಪ್ಯಾಕೆಟ್ ಗಳು, ಬ್ರೆಶ್ ಬಾಟಲಿಯಲ್ಲಿ ಯಾವುದೋ ದ್ರಾವಣಗಳನ್ನು ತೋರಿಸಿ ಇವುಗಳಿಂಧ ಚಿನ್ನ ಪಾಲೀಶ್ ಮಾಡುತ್ತೇವೆ ಎಂದು ಹೇಳಿದಾಗ ಅವರ ಮೇಲೆ ಸ್ವಲ್ಪ ಸಂಶಯ ಬಂದು ಅವರ ಹೆಸರು ಕೇಳಿದಾಗ ಅವರಲ್ಲಿ ತುಂಬು ತೋಳಿನ ಅಂಗಿಯನ್ನು ಧರಿಸಿದ ವ್ಯಕ್ತಿಯ ಹೆಸರು ಆನಂದ ಕಿಶೋರ್ ಮೆಹ್ತಾ ಹಾಗೂ ಅರ್ದ ತೋಳಿನ ಅಂಗಿಯನ್ನು ಹಾಕಿದ ವ್ಯಕ್ತಿಯ ಹೆಸರು ಮನೋಜ್ ಯಾದವ್ ಎಂದು ಹೇಳಿ, ಅವರು ಬಿಹಾರದಿಂದ ಬಂದಿರುವುದಾಗಿ ತಿಳಿಸಿರುತ್ತಾರೆ. ಪಿರ್ಯಾದಿದಾರರು ಸಂಶಯಗೊಂಡು, ಹಿರಿಯಡ್ಕ ಪಿಎಸ್ಐ ರವರಿಗೆ ಫೋನ್ ಮಾಡಿ ವಿಷಯ ತಿಳಿಸಿದಾಗ ಅವರಿಬ್ಬರು ಸಿಟ್ಟುಗೊಂಡು ಪಿರ್ಯಾದಿದಾರರನ್ನು ಉದ್ದೇಶಿಸಿ ಹಿಂದಿಯಲ್ಲಿ ಕೆಟ್ಟದಾಗಿ ಬೈದು ಅಲ್ಲಿಂದ ಹೋಗಲು ಪ್ರಯತ್ನಿಸಿದ್ದು, ಹೋಗುತ್ತಿದ್ದವರನ್ನು ನಿಲ್ಲುವಂತೆ ಹೇಳಿ ಅಲ್ಲಿ ಹೋಗುತ್ತಿದ್ದ ಅವರ ಪರಿಚಯದ ಸದಾನಂದ ಪ್ರಭು, ಶಿವ ಪ್ರಸಾದ್ ರಾವ್ ರವರನ್ನು ಕೂಗಿ ಅಲ್ಲಿಗೆ ಕರೆದು. ವಿಚಾರ ತಿಳಿಸಿದ್ದು, ಸ್ವಲ್ಪ ಸಮಯದ ಬಳಿಕ ಹಿರಿಯಡ್ಕ ಠಾಣೆಯ ಪೊಲೀಸರು ಬಂದು ಅವರನ್ನು ಠಾಣೆಗೆ ಕರೆದುಕೊಂಡು ಹೋಗಿರುತ್ತಾರೆ. ಅವರುಗಳು ಚಿನ್ನ ಪಾಲೀಶ್ ಮಾಡುವುದಾಗಿ ಜನರನ್ನು ನಂಬಿಸಿ ಮೋಸ ಮಾಡುವ ಇರಾದೆಯನ್ನು ಹೋಂದಿದವರಾಗಿರುವುದಾಗಿ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 53/2022 ಕಲಂ: 420, 511, 504 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 18-09-2022 06:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080