ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

  • ಉಡುಪಿ: ಪಿರ್ಯಾದಿದಾರರಾದ ಸ್ಟ್ಯಾನ್ಲಿ ಇ.ಬಿ ಪಾಲನ್ನ (62), ತಂದೆ: ಬೆಂಜಮಿನ್‌ ಟಿ ಪಾಲನ್ನ, ವಾಸ: ಬಿಲ್ಡಿಂಗ್‌ ನಂಬ್ರ: 41/3047, ಅಭ್ಯುದಯ ನಗರ, ಕಾಲಚೌಕಿ, ಮುಂಬೈ, ಮಹಾರಾಷ್ಟ್ರ ಇವರು ದಿನಾಂಕ 02/11/2021 ರಿಂದ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕರಾವಳಿ ಜಂಕ್ಷನ್‌ ಬಳಿ ಇರುವ ಮಣಿಪಾಲ್‌-ಇನ್‌ ಹೋಟೇಲ್‌ನ ರೂಮ್‌ ನಂಬ್ರ: 410 ರಲ್ಲಿ ಉಳಕೊಂಡಿದ್ದು,  ದಿನಾಂಕ 08/11/2021 ರಂದು 14:30 ಗಂಟೆಯಿಂದ 21:30 ಗಂಟೆ ನಡುವೆ ಪಿರ್ಯಾದಿದಾರರ ರೂಮ್‌ನಿಂದ ಹೊರಗೆ ಹೋಗಿದ್ದಾಗ ಯಾರೋ ಕಳ್ಳರು ರೂಮ್‌ನ ಒಳ ಪ್ರವೇಶಿಸಿ ಸೋಪಾದ ಮೇಲೆ ಬೈಬಲ್‌ ಮೇಲೆ ಇಟ್ಟಿದ್ದ ಡೈಮಂಡ್‌ ಇರುವ ಚಿನ್ನದ ಉಂಗುರವನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಉಂಗುರದ  ಮೌಲ್ಯ ರೂಪಾಯಿ 1,07,000/-  ಆಗಿರುತ್ತದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 168/2021 ಕಲಂ: 454, 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಕುಂದಾಪುರ: ಪಿರ್ಯಾದಿದಾರರಾದ ಗೋಪಾಲ (30), ತಂದೆ: ತ್ರೀವೇಣಿ ಪ್ರಸಾದ್, ಶಿದಾವೆ ಟೋಲಿ, ರಯ್ಯಪಾರ್, ರಾಮ್ ಕೋಲ, ಕುಶಿನಗರ ಜಿಲ್ಲೆ, ಉತ್ತರ ಪ್ರದೇಶ ಇವರ ಅಕ್ಕ ಮಗನಾದ ಶುಭಂ (20) ಎಂಬುವವರು 2 ತಿಂಗಳಿನಿಂದ ಕುಂದಾಪುರದ ನಾರಾಯಣ ಗುರು ರಸ್ತೆಯಲ್ಲಿರುವ  ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದು, ದಿನಾಂಕ 17/11/2021 ರಂದು ಬೆಳಿಗ್ಗೆ 12:00 ಗಂಟೆಯ  ಸಮಯಕ್ಕೆ ಪಿರ್ಯಾದಿದಾರರು ಹಾಗೂ ಇತರರರೊಂದಿಗೆ ಶುಭಂ ರವರು ಒಂದನೇಯ ಮಹಡಿಯಲ್ಲಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಕಿವಿಯಿಂದ ರಕ್ತ ಬಂದಿದ್ದು, ಪಿರ್ಯಾದಿದಾರರು ಹಾಗೂ ಇತರರು ಸೇರಿ ಕೂಡಲೇ ಕುಂದಾಪುರ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಾಧಿಕಾರಿಯವರಲ್ಲಿ ಪ್ರಥಮ ಚಿಕಿತ್ಸೆ ನೀಡಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಸಂಜೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿರುವಾಗ ದಿನಾಂಕ 18/11/2021 ರಂದು ಬೆಳಿಗ್ಗೆ 6:50 ಗಂಟೆ ಸಮಯಕ್ಕೆ ಚಿಕಿತ್ಸೆ ಫಲಿಕಾರಿಯಾಗದೇ ಮೃತ ಪಟ್ಟಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 48/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತ್ತೀಚಿನ ನವೀಕರಣ​ : 19-11-2021 10:20 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080