ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕುಂದಾಪುರ: ದಿನಾಂಕ 20/03/2023 ರಂದು ಬೆಳಗಿನ ಜಾವ 03:00 ಗಂಟೆಗೆ,  ಕುಂದಾಪುರ ತಾಲೂಕಿನ ಕೊಟೇಶ್ವರ  ಗ್ರಾಮದ ಸಹನಾ ಹಾಲ್‌ ಬಳಿ ಪೂರ್ವ  ಬದಿಯ  NH 66 ರಸ್ತೆಯಲ್ಲಿ,  ಆಪಾದಿತ ಮೋಹನ್‌ಬಾಬು KA-43-9332ನೇ ಟಾಟಾ 407 ಟೆಂಪೋವನ್ನು  ಬೈಂದೂರು  ಕಡೆಯಿಂದ ಉಡುಪಿ ಕಡೆಗೆ ಅತೀವೇಗ  ಹಾಗೂ ನಿರ್ಲಕ್ಷ್ಯತನದಿಂದ  ಚಾಲನೆ ಮಾಡಿಕೊಂಡು ಬಂದು ನಿಯಂತ್ರಣ  ತಪ್ಪಿ,NH 66 ರಸ್ತೆ ಡಿವೈಡರ್ ಮಧ್ಯೆ ಉಡುಪಿ ನವಯುಗ  ಟೋಲ್‌ ‌ಸಂಸ್ಥೆಯವರು ಅಳವಡಿಸಿದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಹಾಗೂ ಟೆಂಪೋ ಜಖಂಗೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 33/2023 ಕಲಂ: 279 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ಪಿರ್ಯಾದಿದಾರರಾದ ಗುರುಸ್ವಾಮಿ (38), ತಂದೆ: ದಿ. ಶಿವಪ್ಪ ವಿಭೂತಿ, ವಾಸ: 7-134, ಬೊ2, ಕೊಡಂಕೂರು, ನಿಟ್ಟೂರು ಅಂಚೆ, ಪುತ್ತೂರು ಗ್ರಾಮ ಉಡುಪಿ ಇವರು ದಿನಾಂಕ 21/03/2023 ರಂದು ಬೆಳಿಗ್ಗೆ ಅಗತ್ಯದ ಕೆಲಸ ನಿಮಿತ್ತ ಮಲ್ಪೆಗೆ ತನ್ನ KA-20-EV-1556 TVS XL ಸ್ಕೂಟರಿನಲ್ಲಿ ಹೋಗಿದ್ದು, ವಾಪಾಸ್ಸು ಮನೆಗೆ ಮಲ್ಪೆಯಿಂದ ನಿಟ್ಟೂರಿಗೆ ಬರುತ್ತಿರುವಾಗ ಬೆಳಿಗ್ಗೆ 11:15 ಗಂಟೆಗೆ ಪಂದುಬೆಟ್ಟು ಮಸೀದಿ ಬಳಿ ತಲುಪುವಾಗ ಉಡುಪಿ ಕರಾವಳಿ ಕಡೆಯಿಂದ ಮಲ್ಪೆ ಕಡೆಗೆ KA-19-HL-7125 ನೇ ಮೋಟಾರು ಸೈಕಲ್ ಸವಾರ ತನ್ನ ಮೋಟಾರು ಸೈಕಲನ್ನು ದುಡುಕುತನ ಮತ್ತು ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲಬದಿಗೆ ಬಂದು ಪಿರ್ಯಾದಿದಾರರ ಸ್ಕೂಟರಿಗೆ ಡಿಕ್ಕಿ ಹೊಡೆದು ಮೋಟಾರು ಸೈಕಲ್ ಸವಾರ ನಿಯಂತ್ರಣ ತಪ್ಪಿ ಪಿರ್ಯಾದಿದಾರರ ಹಿಂದಿನಿಂದ ಮಲ್ಪೆ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಸರಕಾರಿ ಬಸ್ಸು ನಂಬ್ರ KA-07-F-1765 ನೇದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೋಟಾರು ಸೈಕಲ್ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದು ಬೈಕ್ ಸವಾರನ ತಲೆಗೆ ಮತ್ತು ಮುಖಕ್ಕೆ ಗಂಭೀರ ಸ್ವರೂಪದ ರಕ್ತಗಾಯವಾಗಿದ್ದು, ಪ್ರಸ್ತುತ ಕೆಎಮ್‌ಸಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿರುತ್ತದೆ. ಪಿರ್ಯಾದುದಾರರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಪಾದದ ಬಳಿ ರಕ್ತಗಾಯ ಮತ್ತು ಬಲಭುಜಕ್ಕೆ ಗುದ್ದಿದ ಒಳಜಖಂ ಆಗಿರುತ್ತದೆ. ಪಿರ್ಯಾದಿದಾರರು ತ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 33/2023 ಕಲಂ: 279, 337, 338  ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

 ಅಸ್ವಾಭಾವಿಕ ಮರಣ ಪ್ರಕರಣ

  • ಕಾರ್ಕಳ: ಪಿರ್ಯಾದಿದಾರರಾದ ಭರತ್‌ ಶೆಟ್ಟಿ (48), ತಂದೆ: ಕೆ. ನಾರಾಯಣ ಶೆಟ್ಟಿ, ವಾಸ: ಬೈರ್ಲಬೆಟ್ಟುಗುತ್ತು, ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಇವರು ದಿನಾಂಕ 21/03/2023 ರಂದು ಬೆಳಗ್ಗೆ 09:00 ಗಂಟೆಗೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಬೈರ್ಲಬೆಟ್ಟುಗುತ್ತು ಹಾಡಿ ಪ್ರದೇಶದ ಬಳಿ ನಡೆದುಕೊಂಡು ಹೋಗುತ್ತಿರುವಾಗ ವಿಪರೀತ ವಾಸನೆ ಬರುತ್ತಿದ್ದು ಪಿರ್ಯಾದಿದಾರರು ಹಾಡಿ ಬಳಿ ಹತ್ತಿರ ಹೋಗಿ ನೋಡಿದಾಗ ಸುಮಾರು 30 ರಿಂದ 35 ವರ್ಷ ಪ್ರಾಯದ ಗಂಡಸು ಕುಂಟಾಲು ಮರದ ಕೊಂಬೆಗೆ ಅಂಗಿಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದು ಮೃತದೇಹವು ಕೊಳೆತು ದುರ್ವಾಸನೆ ಬರುತ್ತಿದ್ದು ಗುರುತು ತಿಳಿಯುವ ಸ್ಥಿತಿಯಲ್ಲಿರುವುದಿಲ್ಲ. ಯಾರೋ ಅಪರಿಚಿತ ಗಂಡಸು ಯಾವುದೋ ಕಾರಣದಿಂದ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 13/2023ಕಲಂ: 174 C CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.       

ಇತರ ಪ್ರಕರಣ

  • ಉಡುಪಿ: ದಿನಾಂಕ 18/03/2023 ರಂದು ಉಡುಪಿ ತಾಲೂಕು,ಹೆರ್ಗ ಗ್ರಾಮದ ಈಶ್ವರ ನಗರದ ಪವಿತ್ರಾ ರೆಸಿಡೆನ್ಸಿಬಳಿ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಆರ್ ಸೂರ್ಯ (20) ಎಂಬಾತನನ್ನು ಅಶೋಕ್  ಕುಮಾರ್ , ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ಇವರು   ವಶಕ್ಕೆ ಪಡೆದು ಮೆಡಿಕಲ್ ತಪಾಸಣೆಗೊಳಪಡಿಸಿದ್ದು, ದಿನಾಂಕ 21/03/2023  ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞ ವರದಿಯನ್ನು ಸ್ವೀಕರಿಸಿದ್ದು, ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದಾಗಿದೆ.  ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 39 /2023 ಕಲಂ: 27 (b) ಎನ್‌.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ದಿನಾಂಕ 18/03/2023 ರಂದು ಉಡುಪಿ ತಾಲೂಕು, ಹೆರ್ಗ ಗ್ರಾಮದ ಈಶ್ವರ ನಗರದ ಪವಿತ್ರಾ ರೆಸಿಡೆನ್ಸಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ರೋಹಿತ್ ರಾಜೇಶ್ (20) ಎಂಬಾತನನ್ನು ಅಶೋಕ್  ಕುಮಾರ್ , ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ಇವರು ವಶಕ್ಕೆ ಪಡೆದ್ದು ಮೆಡಿಕಲ್ ತಪಾಸಣೆಗೊಳಪಡಿಸಿದ್ದು,  ದಿನಾಂಕ 21/03/2023  ರಂದು  ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞ ವರದಿಯನ್ನು ಸ್ವೀಕರಿಸಿದ್ದು,  ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದಾಗಿದೆ. ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 40/2023 ಕಲಂ: 27 (b) ಎನ್.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ

ಇತ್ತೀಚಿನ ನವೀಕರಣ​ : 21-03-2023 06:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080