ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಕಾಪು: ದಿನಾಂಕ 04/06/2022  ರಂದು ಪಿರ್ಯಾದಿದಾರರಾದ ನಿತೀನ್ (28) ತಂದೆ : ವಿನೋದರ ಎ. ಸನಿಲ್ ವಾಸ :  ನಿತ್ಯಾನಂದ ನಿವಾಸ  ತಾಳಿತೋಟ ಊಳಿಯಾರಗೋಳಿ ಗ್ರಾಮ ಕಾಪು ಇವರು ಮನೆಯಲ್ಲಿರುವಾಗ  ಅವರ ತಂದೆ  ವಿನೋದರ ಎ. ಸನಿಲ್ (55) ರವರು ಸಂಜೆ ಸುಮಾರು 3:30 ಗಂಟೆಗೆ ತೆಂಗಿನ ಮರದಿಂದ ಸೇಂದಿ ತೆಗೆಯಲು ತೆಂಗಿನ ಮರಕ್ಕೆ ಹತ್ತಿದ್ದು, ತೆಂಗಿನ ಕೊಂಬನ್ನು ಕತ್ತಿಯಿಂದ ಕಟ್ ಮಾಡುವಾಗ ಆಕಸ್ಮಿಕವಾಗಿ ಅವರ ಎಡಕೈ ಮಣಿಗಂಟಿಗೆ ತಾಗಿ ರಕ್ತಗಾಯವಾಗಿ ವಿನೋದರ ಎ. ಸನಿಲ್  ರವರು ಮರದಿಂದ ಕೆಳಗೆ ಬಿದ್ದಿದ್ದು, ನಿತೀನ್‌ ರವರು ಮತ್ತು ಇತರರು ಅವರನ್ನು ಚಿಕಿತ್ಸೆಯ ಬಗ್ಗೆ ಉಡುಪಿ ಹೈಟೆಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ.ಎಮ್.ಸಿ. ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದಂತೆ ಕೆ.ಎಮ್.ಸಿ ಆಸ್ಪತ್ರೆಗೆ ದಾಖಲಿಸಿದ್ದು, ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು  ದಿನಾಂಕ 11/06/2022 ರಂದು ಕೈಯನ್ನು ಶಸ್ತ್ರ ಚಿಕಿತ್ಸೆ ಮಾಡಿದ್ದು ನಂತರ ಆರೋಗ್ಯದಲ್ಲಿ  ಏರುಪೇರಾಗಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ದಿನಾಂಕ 18/06/2022 ರಂದು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ  ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ದಿನಾಂಕ 21/06/2022 ರಂದು ಬೆಳಗಿನ ಜಾವ 02:45  ಗಂಟೆಗೆ ವೈದ್ಯರು ಪರಿಕ್ಷೀಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ನಿತೀನ್‌ ರವರ ತಂದೆ ದಿನಾಂಕ 04/06/2022 ರಂದು ತೆಂಗಿನ ಮರದಿಂದ  ಆಕಸ್ಮಿಕವಾಗಿ ಕಾಲು  ಜಾರಿ ಬಿದ್ದು ಚಿಕಿತ್ಸೆ ಬಗ್ಗೆ ಮಣಿಪಾಲ ಮತ್ತು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು  ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 21/06/2022 ರಂದು ಬೆಳಗಿನ ಜಾವ 02:45  ಗಂಟೆಗೆ ಮೃತಪಟ್ಟಿರುತ್ತಾರೆ. ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲವಾಗಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 18/2020 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 21-06-2022 05:56 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080