ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕುಂದಾಫುರ: ದಿನಾಂಕ 25/04/2023 ರಂದು ಸಂಜೆ ಸುಮಾರು 7:30  ಗಂಟೆಗೆ, ಕುಂದಾಪುರ  ತಾಲೂಕಿನ, ಬಳ್ಕೂರು ಗ್ರಾಮದ ಬಿ. ಹೆಚ್‌‌ಜಂಕ್ಷನ್‌‌ಬಳಿ, ಸ್ವಾತಿ ಶಾಮಿಯಾನದ ಹತ್ತಿರ ರಾಜ್ಯ ಹೆದ್ದಾರಿಯಲ್ಲಿ, ಆಪಾದಿತ ರಜತ್‌ಕೆ ಎಂಬವರು, KA-20 EM-3811ನೇ ಬುಲೆಟ್‌‌ನ್ನು ಕಂಡ್ಲೂರು ಕಡೆಯಿಂದ  ಕುಂದಾಪುರ ಕಡೆಗೆ  ಅತೀವೇಗ ಹಾಗೂ ನಿರ್ಲಕ್ಷತನದಿಂದ ಸವಾರಿ ಮಾಡಿಕೊಂಡು ಬಂದು, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನರಸಿಂಹ ಮೋಗವೀರ (53) ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ, ನರಸಿಂಹ ಮೋಗವೀರರವರ ತಲೆಗೆ ಒಳಜಖಂ ಗಾಯ, ಎರಡೂ, ಎರಡೂ ಕೈಗಳಿಗೆ ಒಳನೋವಾದ ಗಾಯವಾಗಿ ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ಒಳರೋಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಕುಂದಾಫುರ ಸಂಚಾರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 57/2023 ಕಲಂ: 279,  337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಮಾಧಕ ವಸ್ತು ಸೇವನೆ ಪ್ರಕರಣ

  • ಉಡುಪಿ: ದಿನಾಂಕ 21/04/2023 ರಂದು ಉಡುಪಿ ತಾಲೂಕು, ಶಿವಳ್ಳಿ ಗ್ರಾಮದ ಅಂಬಾಗಿಲು ಸಂತೋಷ ನಗರ ಬಳಿ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ವ್ಯಕ್ತಿಯನ್ನು ಕೋಕಿಲ ಹೆಚ್.ಜೆ. ಪೊಲೀಸ್ ಉಪ- ನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿರವರು ವಶಕ್ಕೆ ಪಡೆದ್ದು, ಆತನ ಸಮ್ಮತಿ ಪಡೆದು, ಮೆಡಿಕಲ್ ತಪಾಸಣೆಗೊಳಪಡಿಸಿ, ದಿನಾಂಕ 26/04/2023  ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞ ವರದಿಯನ್ನು ಸ್ವೀಕರಿಸಿ, ವರದಿಯಲ್ಲಿ ಆರೋಪಿ ಅಜೀಶ್ ಈತನು ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟ ಮೇರೆಗೆ ಸೆನ್‌ ಅಪರಾಧ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 80/2023 ಕಲಂ 27(ಬಿ) ಎನ್.ಡಿ.ಪಿ.ಎಸ್ ಕಾಯ್ದೆ ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 26-04-2023 06:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080