ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಪಡುಬಿದ್ರಿ: ಪಿರ್ಯಾದಿದಾರರಾದ ಶಿವಪ್ರಕಾಶ್ (19), ತಂದೆ: ಉಮನಾಥ ಕೆ.ಆರ್. ವಾಸ: ಆಯುಷ್, ಸುಜ್ಲಾನ್ ಆರ್ & ಆರ್ ಕಾಲೋನಿ, ಪಡುಬಿದ್ರಿ ಅಂಚೆ, ನಡ್ಸಾಲು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಇವರು ದಿನಾಂಕ 25/02/2023 ರಂದು ರಾತ್ರಿ 21:00 ಗಂಟೆಗೆ ಕಾಪು ತಾಲೂಕು ನಡ್ಸಾಲು ಗ್ರಾಮ ಪಡುಬಿದ್ರಿಯ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ನಡೆಯುತ್ತಿರುವ ಢಕ್ಕೆಬಲಿ ಪೂಜೆಗೆ ಅವರ ತಮ್ಮ ಆದರ್ಶ್‌, ಹಾಗೂ ಇಬ್ಬರು ಸ್ನೇಹಿತರಾದ ಧನುಷ್ ಮತ್ತು ಪ್ರತೀಕ್ ಎಂಬುವರೊಂದಿಗೆ ಹೋಗಿದ್ದು, ದಿನಾಂಕ 26/02/2023 ರಂದು ರಾತ್ರಿ 01:00 ಗಂಟೆಯ ವೇಳೆಗೆ ಪಿರ್ಯಾದಿದಾರರು ಮೂತ್ರ ವಿಸರ್ಜನೆಗೆಂದು ಹೋದ ಸಮಯ ಆರೋಪಿತರೆಲ್ಲರೂ ಅಲ್ಲಿಗೆ ಬಂದು, ವಸಂತ ಹಾಗೂ ಬಾಲು ರವರು ಪಿರ್ಯಾದಿದಾರರ ಕಪಾಳಕ್ಕೆ ಹೊಡೆದು, ಎದೆ ಹಾಗೂ ಕುತ್ತಿಗೆಯನ್ನು ಹಿಡಿದು ನೆಲಕ್ಕೆ ಬೀಳಿಸಿ ಸಾಯಿಸುವುದಾಗಿ ಹೇಳಿದ್ದು, ನಂತರ ವಸಂತ ಮತ್ತು ಬಾಲು ಪಿರ್ಯಾದಿದಾರರನ್ನು ಉದ್ದೇಶಿಸಿ ಅವಾಚ್ಯ ಶಬ್ಧಗಳಿಂದ ಬೈದಿದ್ದು, ಹಲ್ಲೆಯಿಂದಾಗಿ ಪಿರ್ಯಾದಿದಾರರ ಕೆನ್ನೆಗೆ ಹಾಗೂ ಎದೆಗೆ ಗುದ್ದಿದನೋವುಂಟಾಗಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 19/2023,  ಕಲಂ: 504, 323, 506 ಜೊತೆಗೆ 34 ಐಪಿಸಿ ಮತ್ತು ಕಲಂ: 3(1)(r), 3(1)(s), 3(2)(v-a) SC/ST (POA) Act ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಪಡುಬಿದ್ರಿ: ಪಿರ್ಯಾದಿದಾರರಾದ ನವೀನ್ (34), ತಂದೆ: ಹಿರಿಯಣ್ಣ ಸಾಲ್ಯಾನ್, ವಾಸ; ಎರ್ಮಾಳು ತೆಂಕ ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಇವರು ದಿನಾಂಕ 25/02/2023 ರಂದು ಕಾಪು ತಾಲೂಕು ನಡ್ಸಾಲು ಗ್ರಾಮ ಪಡುಬಿದ್ರಿಯ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ನಡೆಯುತ್ತಿರುವ ಢಕ್ಕೆಬಲಿ ಉತ್ಸವಕ್ಕೆ ಅವರ ಸ್ನೇಹಿತರಾದ ರಾಕೇಶ್, ದಿವಾಕರ, ಬಾಲಕೃಷ್ಣ ಎಂಬುವವರ ಜೊತೆಗೆ ಹೋಗಿದ್ದು, ದಿನಾಂಕ 26/02/2023 ರಂದು ರಾತ್ರಿ 00:01 ಗಂಟೆಯ ವೇಳಗೆ ಬ್ರಹ್ಮಸ್ಥಾನದ ನೀರಿನ ಟ್ಯಾಂಕ್ ಬಳಿ ಬ್ರಹ್ಮಸ್ಥಾನದ ಕಡೆಗೆ  ಹೋಗುತ್ತಿರುವಾಗ ಆರ್ & ಆರ್ ಕಾಲೋನಿ ಕಂಚಿನಡ್ಕದ ನಿವಾಸಿ ಉಮಾನಾಥ ರವರ ಮಗ ಶಿವಪ್ರಕಾಶ್ ಎಂಬಾತನು ಪಿರ್ಯಾದಿದಾರರನ್ನು ತಡೆದು ನಿಲ್ಲಿಸಿ ವಸಂತ ಎಲ್ಲಿದ್ದಾನೆ ಎಂದು ಕೇಳಿ,  ಚೂರಿ ಹಾಕಿ ಕೊಲ್ಲುತ್ತೇನೆ ಎಂದು ಜೀವ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 20/2023, ಕಲಂ: 341, 504, 506 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 27-02-2023 09:22 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080