ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕಾರ್ಕಳ : ಪಿರ್ಯಾದಿ ಶಿವಾನಂದ ಬಂಗೇರ, ಪ್ರಾಯ 46 ವರ್ಷ,  ತಂದೆ: ಸುಬ್ಬಯ್ಯ ಪೂಜಾರಿ, ವಾಸ: ಶ್ರೀರಕ್ಷಾ, ಮಾರಿಗುಡಿ ಬಳಿ, ರೆಂಜಾಳ ಗ್ರಾಮ, ಕಾರ್ಕಳ ಇವರು  ದಿನಾಂಕ: 29.07.2022 ರಂದು ಮದ್ಯಾಹ್ನ ತನ್ನ ಮೋಟಾರ್ ಸೈಕಲ್ ನಲ್ಲಿ ಕಾರ್ಕಳ ಕಡೆಯಿಂದ ಬೆಳುವಾಯಿ ಕಡೆಗೆ ಹೊರಟಿದ್ದು ಸಮಯ ಸುಮಾರು ಮದ್ಯಾಹ್ನ 3:30 ಗಂಟೆಗೆ ಕಾರ್ಕಳ ತಾಲೂಕು ಸಾಣೂರು ಗ್ರಾಮದ ಮುರತಂಗಡಿ ಜಂಕ್ಷನ್ ನ ಇರ್ವತ್ತೂರು ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಲುಪುವಾಗ ಕಾರ್ಕಳ ಕಡೆಯಿಂದ ಬೆಳುವಾಯಿ ಕಡೆಗೆ ಪೂಜಾರಿ ಮನನ್ ರವಿ ಎಂಬುವವರು ಸವಾರಿ ಮಾಡಿಕೊಂಡು ಹೋಗುತ್ತಿದ್ದ KA20W791 ನೇ ನೋಂದಣಿ ಸಂಖ್ಯೆಯ ಮೋಟಾರ್ ಸೈಕಲ್ ಗೆ ಬೆಳುವಾಯಿ ಕಡೆಯಿಂದ ಕಾರ್ಕಳ ಕಡೆಗೆ KA19AA8776 ನೇ ನೋಂದಣಿ ಸಂಖ್ಯೆಯ ಗೂಡ್ಸ್ ಟೆಂಪೋವನ್ನು ಅದರ ಚಾಲಕ ಅಖಿಲೇಶ್ ಎಂಬಾತನು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಯಾವುದೇ ಸೂಚನೆ ನೀಡದೇ ಇರ್ವತ್ತೂರು ರಸ್ತೆ ಕಡೆಗೆ ತಿರುಗಿಸಿ ಡಿಕ್ಕಿ ಹೊಡೆದ ಪರಿಣಾಮ ಮೋಟರ್ ಸೈಕಲ್ ಸವಾರ ಪೂಜಾರಿ ಮನನ್ ರವಿ ಮೋಟಾರ್ ಸೈಕಲ್ ನೊಂದಿಗೆ ರಸ್ತೆಗೆ ಬಿದ್ದಿದ್ದು, ಬಿದ್ದ ಪರಿಣಾಮ ಧರಿಸಿದ್ದ ಹೆಲ್ಮೆಟ್ ರಸ್ತೆಗೆ ಬಿದ್ದಿರುತ್ತದೆ. ಪೂಜಾರಿ ಮನನ್ ರವಿ ರವರಿಗೆ ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿದ್ದು, ಮಾತನಾಡತ್ತಿರಲಿಲ್ಲ. ಪೂಜಾರಿ ಮನನ್ ರವಿ ರವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಂಜೆ 5:30 ಗಂಟೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಪೂಜಾರಿ ಮನನ್ ರವಿ ರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್  ಠಾಣಾ  ಅಪರಾಧ ಕ್ರಮಾಂಕ  103/2022 ಕಲಂ 279,304(A) ಐಪಿಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 30-07-2022 10:22 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080